Haveri

ವಿಡಿಯೋ ಕಾಲ್ ಮೂಲಕ ಮಹಿಳೆಗೆ ಹೆರಿಗೆ; ಮಗು, ತಾಯಿ ಇಬ್ಬರೂ ಸುರಕ್ಷಿತ, ಮಹಿಳಾ ಮಣಿಗಳ ಸಾಹಸಕ್ಕೆ ಎಲ್ಲೆಡೆ ಶ್ಲಾಘನೆ!
ಹೆರಿಗೆ ನೋವು ಕಾಣಿಸಿಕೊಂಡಿದ್ದ ಗರ್ಭಿಣಿ ಮಹಿಳೆಗೆ ವೈದ್ಯರು ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಪರಿಸ್ಥಿತಿ ನೋಡಿಕೊಂಡು ಸೋಯಾಬಿನ್ ಬಿತ್ತನೆ ಮಾಡಿ: ಬಿ.ಸಿ.ಪಾಟೀಲ್ ಮನವಿ
ಕಳೆದ ವರ್ಷ ಸುರಿದ ಹೆಚ್ಚಿನ ಪ್ರವಾಹದಿಂದಾಗಿ ಈ ವರ್ಷ ಸೋಯಾಬಿನ್ ಬೀಜ ಮೊಳಕೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಾರಿ ಪರಿಸ್ಥಿತಿ ನೋಡಿಕೊಂಡು ಬಿತ್ತನೆಗೆ ಮುಂದಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.

ಕುಡಿಯುವ ನೀರಿನ ಘಟಕದಲ್ಲಿ ಅವ್ಯವಸ್ಥೆ: ಸಚಿವ ಬಿ.ಸಿ.ಪಾಟೀಲ್ ಗರಂ
ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸ್ವಚ್ಛತೆ ಇಲ್ಲದ್ದನ್ನು ಕಂಡ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಸ್ವ ಕ್ಷೇತ್ರ ಹಿರೇಕೆರೂರಿನಲ್ಲಿ ನಡೆದಿದೆ.

ಹಾವೇರಿ: ನಕಲಿ ಬಿಡಿ ಬೀಜ ದಾಸ್ತಾನು; ಸುಮಾರು 6 ಕೋಟಿ ರೂ. ಮೌಲ್ಯದ ಬೀಜ ವಶ
ನಕಲಿ ಬಿಡಿ ಬೀಜಗಳನ್ನು ದಾಸ್ತಾನು, ಮಾರಾಟ ಮಾಡಲು ಸಿದ್ಧವಾಗಿದ್ದ ಬೀಜ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸಿದ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು, ಸುಮಾರು ಆರು ಕೋಟಿ ರೂ.ಮೌಲ್ಯದ ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿದ್ದಾರೆ.

ಹಾವೇರಿ: ನಿಯಮ ಉಲ್ಲಂಘನೆ; ಬೀಜ ಮಾರಾಟ ಪರವಾನಿಗೆ ಅಮಾನತು
ಬೀಜ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ ಆದೇಶಿಸಲಾಗಿದೆ

ಮುಸಲ್ಮಾನರ ವಿರುದ್ಧ ದ್ವೇಷ ಹೇಳಿಕೆ: ದುಬೈಯಲ್ಲಿ ಹಾವೇರಿ ಮೂಲದ ರಾಕೇಶ್ ಬಂಧನ, ಆತಂಕದಲ್ಲಿ ಕುಟುಂಬಸ್ಥರು
ದುಬೈಯಲ್ಲಿ ಬಂಧನಕ್ಕೊಳಗಾಗಿರುವ ಹಾವೇರಿ ಮೂಲದ ರಾಕೇಶ್ ಕಿತ್ತೂರುಮಠ ಅವರ ಕುಟುಂಬಸ್ಥರು ತೀವ್ರ ಆತಂಕಕ್ಕೀಡಾಗಿದ್ದಾರೆ. ಬಂಧನದ ಸುದ್ದಿ ಬಂದ ನಂತರ ರಾಣೆಬೆನ್ನೂರಿನಲ್ಲಿರುವ ರಾಕೇಶ್ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಸಂಪರ್ಕವೇ ಸಿಕ್ಕಿಲ್ಲ.

ಹಾವೇರಿ ಜಿಲ್ಲಾಸ್ಪತ್ರೆಗೆ ಬಿ. ಸಿ. ಪಾಟೀಲ್ ಭೇಟಿ: ಟಾಸ್ಕ್ ಪೋರ್ಸ್ ಕಾರ್ಯಾಚರಣೆ ಬಗ್ಗೆ ಪರಿಶೀಲನೆ
ಕೊರೋನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.

ಹಾವೇರಿ: ಕೊರೊನಾ ಸುಳ್ಳು ಸುದ್ದಿ ಹಬ್ಬಿಸಿದ ವೈದ್ಯನಿಗೆ ಶಾಸಕರಿಂದ ತರಾಟೆ
ಕೊರೊನಾ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ್ದ ವೈದ್ಯರೊಬ್ಬರನ್ನು ಶಾಸಕ ನೆಹರು ಓಲೆಕಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ತೀವ್ರ ತರಾಟೆಗೆ ಗುರಿಪಡಿಸಿದ್ದಾರೆ.

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ
ಮುಂಬರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

