HD Devegowda

ಸೋನಿಯಾ ಗಾಂಧಿ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭಾಗಿ!
ವಿಪಕ್ಷ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡೆಸಿದ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಭಾಗವಹಿಸಿದ್ದರು.

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು. ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು ಪತ್ರದ ಮೂಲಕ ಮನವಿ ಮಾಡಿದ್ದರು.

ಹಣ್ಣು, ತರಕಾರಿ, ಹೂವು ಬೆಳೆದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಎಚ್.ಡಿ. ದೇವೇಗೌಡ
ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಹಣ್ಣು, ತರಕಾರಿ, ಹೂವು ಬೆಳೆದು ನಷ್ಟಗೊಂಡಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಮಂತ್ರಿ ಎಚ್. ಡಿ. ದೇವೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ

ಕೊರೋನಾ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ; ಪ್ರಧಾನಿ ನಿರ್ಧಾರಕ್ಕೆ ಬೆಂಬಲ: ಎಚ್.ಡಿ.ದೇವೇಗೌಡ
ಕೊರೋನಾ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ. ಇದರ ವಿರುದ್ಧ ಹೋರಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ನಿರ್ಧಾರಗಳಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ

ಕೋವಿಡ್-19 ಸಮಸ್ಯೆ ಮುಗಿದ ನಂತರ ಮತ್ತಷ್ಟು ಸಮಸ್ಯೆ: ದೇವೇಗೌಡ ಎಚ್ಚರಿಕೆ
ಕೋವಿಡ್-19 ಕಾಯಿಲೆ ಕತೆ ಮುಗಿದ ನಂತರ ಇದಕ್ಕಿಂತ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತದೆ. ನಮ್ಮ ರೈತರು ಬೀದಿಗೆ ಬೀಳಬೇಕಾದ ಸಂದರ್ಭ ಎದುರಾಗಬೇಕಾಗುತ್ತದೆ. ಆದ್ದರಿಂದ ಈಗಿನಿಂದಲೇ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ ದೇವೇಗೌಡ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ
ಕೊರೋನಾ ಸೋಂಕಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಪಿಂಚಣಿ ಹಣದಿಂದ 1 ಲಕ್ಷ ರೂ. ದೇಣಿಗೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನಿ ನಿಧಿ, ಕೇರಳ, ಕರ್ನಾಟಕ ಸಿಎಂ ಪರಿಹಾರ ನಿಧಿಗಳಿಗೆ ತಲಾ 1 ಲಕ್ಷ ರೂ. ನೀಡಿದ ದೇವೇಗೌಡ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಪಿಂಚಣಿಯ 3 ಲಕ್ಷ ರೂ. ಹಣವನ್ನು ನೀಡಿದ್ದಾರೆ.

ಲಾಕ್‌ಡೌನ್ ಚಿಂತಿಸದೆ ತರಾತುರಿಯಲ್ಲಿ ತೆಗೆದುಕೊಂಡ ಆತುರದ ನಿರ್ಧಾರ: ದೇವೇಗೌಡ ಆಕ್ರೋಶ
ಲಾಕ್‌ಡೌನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಇದು ಮುಂದಾಲೋಚನೆ ಇಲ್ಲದೆ ಸರಿಯಾಗಿ ಚಿಂತಿಸದೆ ತರಾತುರಿಯಲ್ಲಿ ತೆಗೆದುಕೊಂಡ ಆತುರದ ನಿರ್ಧಾರವಾಗಿದ. ಇದರಿಂದ ರೈತರು ಅತೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ/ದೇಶದಲ್ಲಿ ಆಹಾರ ಪದಾರ್ಥಗಳ ಅಭಾವವು ಉಂಟಾಗಿ ಜನ ದಂಗೆ ಏಳಬಹುದು ಎಂದು ಎಚ್ಚರಿಸಿದ್ದಾರೆ.

ಐಕ್ಯತೆ ಪ್ರದರ್ಶನ ಓಕೆ, ಜೊತೆಗೆ ಕೊರೋನಾ ಸೋಂಕು ಪರೀಕ್ಷಾ ಕಿಟ್‌ಗಳನ್ನು ಹೆಚ್ಚೆಚ್ಚು ಒದಗಿಸಿ: ಮಾಜಿ ಪ್ರಧಾನಿ ದೇವೇಗೌಡ
ಇದೇ 5ರಂದು ರಾತ್ರಿ ದೀಪ ಆರಿಸಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಐಕ್ಯತೆ ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ವಾಗತಿಸಿದ್ದಾರೆ.

