health department

ಕರ್ನಾಟಕ ಲಾಕ್ ಡೌನ್; ಬಾರ್ಗಳಲ್ಲಿ ಪಾರ್ಸೆಲ್ಗೆ ಅವಕಾಶ, ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕಿಲ್ಲ ಅವಕಾಶ; ಇಲ್ಲಿದೆ ಸಂಪೂರ್ಣ ಮಾರ್ಗಸೂಚಿ
ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಸಂಪೂರ್ಣ ಲಾಕ್ ಡೌನ್ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಾರ್ಗ ಸೂಚಿ ಬಿಡುಗಡೆ ಮಾಡಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 592 ಮಂದಿ ಸಾವು, 48,781 ಹೊಸ ಸೋಂಕು ಪ್ರಕರಣ ದಾಖಲು!
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ.

12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳು; ಕೆಲ ರಾಜ್ಯಗಳಲ್ಲಿ ಇಳಿ ಮುಖವಾಗುತ್ತಿದೆ ಸೋಂಕು: ಕೇಂದ್ರ ಆರೋಗ್ಯ ಇಲಾಖೆ
ದೆಹಲಿ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೆಲ ರಾಜ್ಯಗಳಲ್ಲಿ ಸೋಂಕು ಇಳಿಮುಖವಾಗುತ್ತಿರುವ ಚಿಹ್ನೆ ತೋರುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19 2ನೇ ಅಲೆ: ಆರೋಗ್ಯ ಕಾರ್ಯಕರ್ತರ ಕೆಲಸದಲ್ಲಿ ಅತೀವ ಒತ್ತಡ, ಗುಣಮಟ್ಟದ ಚಿಕಿತ್ಸೆ ಮೇಲೆ ಪರಿಣಾಮ!
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ನ ಅಲೆ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಕಾರ್ಯಕರ್ತರು ಹೆಚ್ಚುವರಿ ಸಮಯದಲ್ಲಿ ಕೆಲಸ ಮಾಡುತ್ತಿದ್ದು, ಇದು ಅವರಲ್ಲಿ ಅತೀವ ಒತ್ತಡ ಹೆಚ್ಚಾಗುವಂತೆ ಮಾಡುತ್ತಿದೆ.

14 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಮೊದಲ ರಾಷ್ಟ್ರ ಭಾರತ: ಕೇಂದ್ರ ಸರ್ಕಾರ
14 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಮೊದಲ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಲಸಿಕೆ ವಿತರಣೆ ಪ್ರಕ್ರಿಯೆ ಮತ್ತಷ್ಟು ವೇಗ ಪಡೆಯಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅತಿ ಹೆಚ್ಚು ಸಕ್ರಿಯ ಕೊರೋನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ: ಮುಂಬೈ, ದೆಹಲಿ ಹಿಂದಿಕ್ಕಿದ ಬೆಂಗಳೂರು ಅಗ್ರ ಸ್ಥಾನದಲ್ಲಿ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ಉದ್ಯಾನನಗರಿ ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ದೇಶದ ದೈನಂದಿನ ಕೋವಿಡ್ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಪ್ರಕರಣಗಳು 10 ರಾಜ್ಯಗಳಲ್ಲಿದೆ: ಕೇಂದ್ರ ಆರೋಗ್ಯ ಇಲಾಖೆ
ದೇಶದಲ್ಲಿ ಇಂದು ಪತ್ತೆಯಾಗಿರುವ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಸೋಂಕು ಪ್ರಕರಣಗಳು ಕೇವಲ 10 ರಾಜ್ಯಗಳಿಂದ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 63,294 ಪ್ರಕರಣ ದಾಖಲು
ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು 973 ಹೊಸ ಸೊಂಕು ಪ್ರಕರಣಗಳು ವರದಿ
ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 973 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,18,544ಕ್ಕೆ ಏರಿಕೆಯಾಗಿದೆ.

