ರಾಜ್ಯಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ, ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ: ಸಚಿವ ಡಾ. ಕೆ.ಸುಧಾಕರ್
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಮುಂದುವರಿದಿರುವುದರಿಂದ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ತುರ್ತು ಪರಿಸ್ಥಿತಿ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎಂದೇ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.