Health Ministry

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವೂ ಕೊರೋನಾ ಲಕ್ಷಣ: ಆರೋಗ್ಯ ಸಚಿವಾಲಯ
ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಮೇಲಿನ ಸಂಶೋಧನೆ ಮುಂದುವರೆದಿದ್ದು, ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಗುವುದೂ ಕೂಡ ಕೋವಿಡ್-19 ಸೋಂಕಿನ ಲಕ್ಷಣವಾಗಿರಬಹುದು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್-19: ತುರ್ತು ಚಿಕಿತ್ಸೆಗೆ ರೆಮ್ಡಿಸಿವಿರ್, ಪ್ರಾಥಮಿಕ ಹಂತದಲ್ಲಿ ಹೆಚ್.ಸಿ.ಕ್ಯು ಬಳಕೆಗೆ ಆರೋಗ್ಯ ಸಚಿವಾಲಯದ ಒಪ್ಪಿಗೆ
ಕೋವಿಡ್-19 ಸೋಂಕಿಗೆ ಗುರಿಯಾಗಿರುವವರಿಗೆ ತುರ್ತು ಚಿಕಿತ್ಸೆಗೆ ರೆಮ್ಡಿಸಿವಿರ್ ಹಾಗೂ ಪ್ರಾಥಮಿಕ ಚಿಕಿತ್ಸೆಗೆ ಹೈಡ್ರಾಕ್ಸಿ ಕ್ಲೋರೋಕ್ವಿನ್ ಬಳಕೆಗೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 9,851 ಹೊಸ ಕೊರೋನಾ ಪಾಸಿಟಿವ್ ಪ್ರಕರಣ, ಸೋಂಕಿತರ ಸಂಖ್ಯೆ 2.2 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು. ಕೇವಲ 24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ 9,851 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಕೊರೋನಾ ವೈರಸ್: ಭಾರತದಲ್ಲಿ ಹೊಸದಾಗಿ 6387 ಸೋಂಕು ಪ್ರಕರಣ ಪತ್ತೆ, 24 ಗಂಟೆಯಲ್ಲಿ 170 ಮಂದಿ ಸಾವು
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 6387 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಒಂದೇ ದಿನ ದಾಖಲೆಯ 216 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆ
ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ನ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನ 216 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ.

ಮಂಡ್ಯಗೆ ಕುತ್ತು ತಂದ ವಲಸೆ ಕಾರ್ಮಿಕರು; ಒಂದೇ ದಿನ 22 ಮಂದಿಗೆ ಸೋಂಕು
ಸಕ್ಕರೆ ನಾಡು ಮಂಡ್ಯದಲ್ಲಿ ಒಂದೇ ದಿನ 22 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 22 ಮಂದಿಯ ಪೈಕಿ 19 ಮಂದಿ ವಲಸೆ ಕಾರ್ಮಿಕರಾಗಿದ್ದು, ಅಂತರ್ ರಾಜ್ಯ ಪ್ರಯಾಣದ ಹಿನ್ನಲೆ ಹೊಂದಿದ್ದಾರೆ.

ಕೊರೋನಾ ವೈರಸ್: ರಾಜ್ಯದಲ್ಲಿ ಮತ್ತೆ 54 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆ
ಮಾರಕ ಕೊರೋನಾ ವೈರಸ್ ಹಾವಳಿ ಕರ್ನಾಟಕದಲ್ಲಿ ಮುಂದವರೆದಿದ್ದು, ನಿನ್ನೆ ಸಂಜೆಯಿಂದ ಇಲ್ಲಿಯವರೆಗೂ ಮತ್ತೆ 54 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಪಾಳಿಗಳಲ್ಲಿ ತರಗತಿ ನಡೆಸಲು ಕ್ರಮ: ಶಿಕ್ಷಣ ಇಲಾಖೆ
ಕೊರೋನಾ ಸೋಂಕು ಸುದೀರ್ಘ ಕಾಲ ಉಳಿಯುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಶಾಲೆಗಳನ್ನು ನಡೆಸುವ ಅನಿವಾರ್ಯತೆಗೆ ಸಿಲುಕಿರುವ ಶಿಕ್ಷಣ ಇಲಾಖೆ ಎರಡು ಪಾಳಿಗಳಲ್ಲಿ ತರಗತಿಗಳನ್ನು ನಡೆಸಲು ಮುಂದಾಗಿದೆ.

ಸೋಂಕಿನ ಲಕ್ಷಣವಿಲ್ಲದ ಅನ್ಯ ಜಿಲ್ಲೆಗಳಿಂದ ಆಗಮಿಸಿದ ವ್ಯಕ್ತಿಗಳಿಗೆ ಕ್ವಾರಂಟೈನ್ ಇಲ್ಲ: ಆರೋಗ್ಯ ಇಲಾಖೆ ಪುನರುಚ್ಚಾರ
ಅನ್ಯ ಜಿಲ್ಲೆಯಿಂದ ಇನ್ನೊಂದು ಜಿಲ್ಲೆ ಆಗಮಿಸುವ ವ್ಯಕ್ತಿಗಳಲ್ಲಿ ಕೊರೋನಾ ಸೋಂಕಿನ ಲಕ್ಷಣಗಳಿಲ್ಲದಿದ್ದಲ್ಲಿ ಅವರಿಗೆ ಕ್ವಾರಂಟೈನ್ ಮಾಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಪುನರುಚ್ಚರಿಸಿದೆ.

