ರಾಜ್ಯಆರೋಗ್ಯಾಧಿಕಾರಿಯ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ಬಳಸಬೇಡಿ: ಡಾ.ಕೆ.ಸುಧಾಕರ್ ಮನವಿ
ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೇನಾನಿ ನಂಜನಗೂಡಿನ ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಅವರ ಕುಟುಂಬಕ್ಕೆ ನಮ್ಮ ಸರ್ಕಾರ ಕೂಡಲೇ 30 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಅವರ ಸಾವಿನ ವಿಚಾರವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.