ರಾಜ್ಯ ಬಜೆಟ್ರಾಜ್ಯವನ್ನು ಶ್ರವಣ ದೋಷ ಮುಕ್ತ ಮಾಡಲು ಹೊಸ ಯೋಜನೆ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಮಾಡಲಾಗುವುದು. ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.