ಸಿನಿಮಾ ಸುದ್ದಿಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅನಾರೋಗ್ಯದಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಹಾರ್ಟ್ ರೇಟ್ ಕಡಿಮೆಯಾಗಿ ಸುಸ್ತಿನಿಂದ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.