ರಾಜ್ಯಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಸೂಚನೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.