held

ಅಮಿತ್ ಶಾ ನಕಲಿ ವೀಡಿಯೋ ಪ್ರಕರಣ: ಕಾಂಗ್ರೆಸ್ ಸದಸ್ಯ ಬಂಧನ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವೀಡಿಯೊ ಅಪ್‌ಲೋಡ್ ಮತ್ತು ಹಂಚಿಕೆ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರೊಬ್ಬರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರುಣ್ ರೆಡ್ಡಿ ಬಂಧಿತ ಆರೋಪಿ.

ಲಖನೌ: ವಿಮಾನ ನಿಲ್ದಾಣದಲ್ಲಿ ವಿಚಾರಣೆಗಾಗಿ ವಶದಲ್ಲಿದ್ದ 30 ಪ್ರಯಾಣಿಕರು ಪರಾರಿ!
ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಮನಗರ: ಉದ್ಯಮಿ ಆತ್ಮಹತ್ಯೆ ಪ್ರಕರಣ, ನಕಲಿ ಜ್ಯೋತಿಷಿ ಬಂಧನ
25 ವರ್ಷದ ಉದ್ಯಮಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ನಕಲಿ ಜ್ಯೋತಿಷಿಯನ್ನು ಬಂಧಿಸಲಾಗಿದೆ

ಮಡಿಕೇರಿ: ಎರಡು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ
ಕೊಡಗು ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿ ಮೇಲೆ 37 ವರ್ಷದ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದಕ್ಷಿಣ ಕೊಡಗಿನ ಸಿದ್ದಾಪುರದಲ್ಲಿ ಬುಧವಾರ ಈ ಘಟನೆ ವರದಿಯಾಗಿದೆ. ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಗದಗ: 9 ತಿಂಗಳ ಮೊಮ್ಮಗನನ್ನು ಕತ್ತು ಹಿಸುಕಿ ಕೊಂದ ಆರೋಪ, ಮಹಿಳೆ ಬಂಧನ
ಗಜೇಂದ್ರಗಡ ತಾಲೂಕಿನ ಗ್ರಾಮವೊಂದರಲ್ಲಿ ಮೊಮ್ಮಗನನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಿರುವ ಘಟನೆ ಭಾನುವಾರ ನಡೆದಿದೆ.

ಫೇಸ್‌ಬುಕ್ ಸ್ಟೇಟಸ್ ನಲ್ಲಿ ಪಾಕ್ ಧ್ವಜ ಶೇರ್, ಯುವಕನ ಬಂಧನ
ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಯಲ್ಲಿ ಪಾಕಿಸ್ತಾನ ಧ್ವಜ ಶೇರ್ ಮಾಡಿ, ನಿರ್ದಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳೊಂದಿಗೆ ವೀಡಿಯೊವೊಂದನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 30 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಈ ಘಟನೆ ನಡೆದಿದೆ.

ತ್ರಿಪುರಾ: ಭಾರತಕ್ಕೆ ಅಕ್ರಮ ಪ್ರವೇಶ, 14 ಬಾಂಗ್ಲಾ ಪ್ರಜೆಗಳ ಬಂಧನ
ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇರೆಗೆ ನಾಲ್ವರು ಮಕ್ಕಳು ಸೇರಿದಂತೆ 14 ಬಾಂಗ್ಲಾದೇಶಿ ಪ್ರಜೆಗಳನ್ನು ಭಾನುವಾರ ತ್ರಿಪುರಾದ ಗೋಮತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ
ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ: ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ಆರ್‌ಟಿಐ ಕಾರ್ಯಕರ್ತ ಬಂಧನ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

