ದೇಶರಾಜಕೀಯದಲ್ಲಿ ನಾಯಕನ ಆರಾಧನೆ ಕುರಿತು ಅಂಬೇಡ್ಕರ್ ಎಚ್ಚರಿಸಿದ್ದರು: ಮಲ್ಲಿಕಾರ್ಜುನ ಖರ್ಗೆ
ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ, ಸಂವಿಧಾನವನ್ನು ನಾಶಗೊಳಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.