ದೇಶಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮುಂದಿನ 3 ದಿನ ತೀವ್ರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮುಂದಿನ 3 ದಿನಗಳಲ್ಲಿ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ತೀವ್ರ ಮಳೆಯಾಗಲಿದ್ದು, ನಂತರ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಗುಜರಾತ್, ಪೂರ್ವ ರಾಜಸ್ಥಾನ, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಆ. 6 ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.