high command

ರಾಜ್ಯ ಕಾಂಗ್ರೆಸ್ ಪುನಶ್ಚೇತನಕ್ಕೆ ಡಿಕೆ ಶಿವಕುಮಾರ್ ಸಜ್ಜು: ಹೈ ಕಮಾಂಡ್ ಗ್ರೀನ್ ಸಿಗ್ನಲ್
ನವದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿಯಾಗಿದ್ದಾರೆ.

ಬಿ ಎಸ್ ಯಡಿಯೂರಪ್ಪ ಪೂರ್ಣಾವಧಿ ಸಿಎಂ ಚರ್ಚೆ, ನಾಯಕತ್ವ ಬದಲಾವಣೆ ಕೂಗು ಸದ್ಯಕ್ಕೆ ಶಮನ: ಆದರೆ ಇದು ಬೂದಿ ಮುಚ್ಚಿದ ಕೆಂಡವೇ?
ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬಂದು ಹೋದ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು, ಚರ್ಚೆ ಸದ್ಯಕ್ಕೆ ತಣ್ಣಗಾದಂತೆ ಕಂಡುಬಂದರೂ ಮುಂದೆ ಇನ್ನೆರಡು ವರ್ಷಗಳ ಕಾಲ 2023ರ ವಿಧಾನಸಭೆ ಚುನಾವಣೆಯವರೆಗೆ ಪರಿಸ್ಥಿತಿ ಹೀಗೆಯೇ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಬಿಜೆಪಿಯಲ್ಲಿ ಯಡಿಯೂರಪ್ಪ ಬದಲಿಗೆ ಸಿಎಂ ಸ್ಥಾನಕ್ಕೆ ಮತ್ತೊಬ್ಬ ಸಮರ್ಥ ನಾಯಕರೇ ಇಲ್ಲ: ಸಿದ್ದರಾಮಯ್ಯ
ಕೊರೋನಾ ಸಂಕಷ್ಟ ಎದುರಾಗಿರುವುದರಿಂದ ಯಡಿಯೂರಪ್ಪನವರನ್ನು ಹೈಕಮಾಂಡ್ ಮುಖ್ಯಮಂತ್ರಿಯಾಗಿ ಉಳಿಸಿಕೊಂಡಿದೆಯಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಉಪ ಚುನಾವಣೆಯಲ್ಲಿ ಕಡಿಮೆ ಅಂತರದ ಗೆಲುವು: ವರದಿ ಕೇಳಿದ ದೆಹಲಿಯ ಬಿಜೆಪಿ ನಾಯಕರು!
ಇತ್ತೀಚಿನ ಉಪ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಬಿಜೆಪಿ ವರಿಷ್ಠರು ಬೇಸರ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

ಸಂಪುಟ ವಿಸ್ತರಣೆ ಬಗ್ಗೆ 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಸಿಎಂ ಯಡಿಯೂರಪ್ಪ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನು 2-3 ದಿನಗಳಲ್ಲಿ ನನಗೆ ಗೊತ್ತಾಗಲಿದೆ, ಕೇಂದ್ರ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಉಪ ಚುನಾವಣೆ ಫಲಿತಾಂಶದ ಬಳಿಕ ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ-ಯಡಿಯೂರಪ್ಪ
ತೀವ್ರ ಕುತೂಹಲದಿಂದ ಕಾಯುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲಿಯೇ ನಡೆಯಲಿದೆ. ನವೆಂಬರ್ 10 ರಂದು ವಿಧಾನಸಭಾ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಈ ಸಂಬಂಧ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಉ.ಪ್ರ ಚುನಾವಣೆ ಸಿದ್ಧತೆಗೆ ಕಾಂಗ್ರೆಸ್ ವೇದಿಕೆ ಸಜ್ಜು: ಸಲ್ಮಾನ್ ಖುರ್ಷಿದ್ ಗೆ ಉಸ್ತುವಾರಿ, ಭಿನ್ನಮತೀಯರಿಗೆ ಕೊಕ್
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನೆರಡು ವರ್ಷ ಬಾಕಿಯಿದೆ. ಆಗಲೇ ಸಿದ್ದತೆ ನಡೆಸಿಕೊಳ್ಳುತ್ತಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದ್ದು ಅದರ ನೇತೃತ್ವವನ್ನು ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ವಹಿಸಿಕೊಳ್ಳಲಿದ್ದಾರೆ.

ಹೈಕಮಾಂಡ್ ಗೆ ನಾಲ್ಕು ತಿಂಗಳ ಸಾಧನೆಯ ವರದಿ ಸಲ್ಲಿಸಲು ದೆಹಲಿಗೆ ಡಿಕೆ ಶಿವಕುಮಾರ್
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನಾಲ್ಕು ತಿಂಗಳು ಕಳೆದಿದ್ದು, ನಾಲ್ಕು ತಿಂಗಳ ಪಕ್ಷದ ಸಾಧನೆ ಪಕ್ಷ ಸಂಘಟನೆಯ ವಿವರ ಸೇರಿದಂತೆ ಪ್ರಸಕ್ತ ರಾಜ್ಯದ ರಾಜಕೀಯ ಸ್ಥಿತಿಗತಿಗಳ ವಿವರಗಳ ವರದಿಯನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲು ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಯ್ ಮಾಕೆನ್ ನೇಮಕ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರ ವಿಶ್ವಾಸ ಮತ ಗೆದ್ದ ಎರಡು ದಿನಗಳ ಬಳಿಕ ಸಚಿನ್ ಪೈಲಟ್ ಬೇಡಿಕೆಯಂತೆ ಕಾಂಗ್ರೆಸ್ ಉಸ್ತುವಾರಿಯಿಂದ ಅವಿನಾಶ್ ಪಾಂಡೆ ಅವರನ್ನು ಹೈಕಮಾಂಡ್ ಬದಲಾಯಿಸಿದ್ದು, ಮಾಜಿ ಕೇಂದ್ರ ಸಚಿವ ಅಜಯ್ ಮಾಕೆನ್ ಅವರನ್ನು ನೂತನ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

