high command

ವಿಧಾನ ಪರಿಷತ್ ಚುನಾವಣೆ: 12 ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ ಗೆ ರವಾನಿಸಿದ ಬಿಜೆಪಿ
ಸೋಮವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನಪರಿಷತ್ ಚುನಾವಣೆಗಾಗಿ 12 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಗಿದ್ದು, ಹೈಕಮಾಂಡ್ ಗೆ ರವಾನಿಸಲಾಗಿದೆ.

ಪ್ರಭಾಕರ್ ಕೋರೆಗೆ ರಾಜ್ಯಸಭೆ ಟಿಕೆಟ್ ತಪ್ಪಲು ಕಾರಣವೇನು? ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಸಂದೇಶವೇನು?
ಕರ್ನಾಟಕದಿಂದ ರಾಜ್ಯಸಭೆಗೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಆಯ್ಕೆ ರಾಜ್ಯ ಬಿಜೆಪಿ ಘಟಕಕ್ಕೆ ಅಚ್ಚರಿ ಮೂಡಿಸಿದೆ. ಜೊತೆಗೆ ಪ್ರಬಲ ಸಂದೇಶ ಕೂಡ ರವಾನಿಸಿದೆ.

100 ದಿನ ಪೂರೈಸಿದ 'ಬಂಡಾಯ' ಸಚಿವರ ಮೇಲೆ ಬಿಜೆಪಿ ಹೈಕಮಾಂಡ್ 'ಹದ್ದಿನ ಕಣ್ಣು'!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಪುಟ ಸೇರಿ ನೂರು ದಿನ ಪೂರೈಸಿದ ಕಾಂಗ್ರೆಸ್-ಜೆಡಿಎಸ್ ಬಂಡಾಯ ಸಚಿವರುಗಳ ಕಾರ್ಯ ವೈಖರಿ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣಿಟ್ಟಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ನೇಮಕ: ಸಿಎಲ್ ಪಿ, ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಕೆ
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

'ಸಿದ್ದು' ಕಡೆಗಣಿಸಿದರೆ ಉಳಿಗಾಲವಿಲ್ಲ; 'ಹೈ' ಧೋರಣೆಗೆ ಹಿರಿಯರ ಬೇಸರ; ಭೇಟಿಗೆ ನಾಯಕರ ನಿರ್ಧಾರ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವುದು ಕಷ್ಟ ಎಂದು ಕಾಂಗ್ರೆಸ್ ಹೈಕಮಾಂಡ್ ಸಂದೇಶ ರವಾನಿಸಿದ್ದು, ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೇ ಈ ಕುರಿತು ಹೈಕಮಾಂಡ್ ಭೇಟಿಗೆ ನಿರ್ಧರಿಸಿದ್ದಾರೆ.

ಮತ್ತಷ್ಟು ವಿಳಂಬವಾಯ್ತು ಕೆಪಿಸಿಸಿ ನೇಮಕ : ರಾಜ್ಯ ನಾಯಕರಿಗೆ ಕಾಯುವುದೊಂದೇ ಕಾಯಕ!
ಕೇಂದ್ರ ನಾಯಕತ್ವ ಇನ್ನೂ ಅಂತಿಮ ಆಯ್ಕೆ ಮಾಡದ ಕಾರಣ ನೂತನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆ ನೇಮಕಕ್ಕೆ ಮತ್ತಷ್ಟು ವಿಳಂಬವಾಗಲಿದೆ.

ವಿಧಾನಸಭೆ ಅಧಿವೇಶನಕ್ಕೂ ಮುನ್ನವೇ ಕೆಪಿಸಿಸಿ ಅಧ್ಯಕ್ಷರ ನೇಮಕ
ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ನಡೆಯುತ್ತದೆ ಎಂದು ಕಾಂಗ್ರೆಸ್ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿಲ್ಲ, ಆದರೆ, ಉತ್ತರ ಕರ್ನಾಟಕದವರೇ ಆಗಬೇಕು: ಎಂಬಿ ಪಾಟೀಲ್
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿಲ್ಲ, ಆದರೆ, ವಿಧಾನಸಭೆ ಪ್ರತಿಪಕ್ಷ ಸ್ಥಾನಕ್ಕೆ ದಕ್ಷಿಣದವರಿದ್ದು, ಉತ್ತರ ಕರ್ನಾಟಕ ಭಾಗದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ವಿಶ್ವಾಸ ಹೊಂದಿರುವುದಾಗಿ ಮಾಜಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.

ನಾಲ್ಕೈದು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ: ಈಶ್ವರ ಖಂಡ್ರೆ
ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಇನ್ನು ನಾಲ್ಕೈದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

