High Court

ರಾಜ್ಯ ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್
ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ.

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಎತ್ತಿಹಿಡಿದಿತ್ತು. ಆದರೆ ಇದೀಗ ವಿಭಾಗೀಯ ವೀಠ ಆದೇಶ ರದ್ದುಗೊಳಿಸಿ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

ಧರ್ಮಸ್ಥಳ 74 ಅಸಹಜ ಸಾವು: ಪ್ರತ್ಯೇಕ FIR ದಾಖಲಿಸುವಂತೆ ಹೈಕೋರ್ಟ್‌ಗೆ ಸೌಜನ್ಯ ತಾಯಿ ಮನವಿ
ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು.

ನೈಸ್ (BMIC) ಯೋಜನೆ ರದ್ದುಪಡಿಸುವ ಬಗ್ಗೆ ಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಮಾರ್ಗವನ್ನು ಭವಿಷ್ಯದಲ್ಲಿಯೂ ನಿರ್ಮಿಸುವ ಯಾವುದೇ ಸೂಚನೆ ಕಾಣಿಸುತ್ತಿಲ್ಲ. ಆದ್ದರಿಂದ, ಯೋಜನೆಯನ್ನು ಮರು ಪರಿಶೀಲಿಸಬೇಕು ಮತ್ತು ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಕೋಗಿಲು ಅಕ್ರಮ ಮನೆಗಳ ತೆರವು ಪ್ರಕರಣ: ಪರಿಹಾರ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ
ಮನೆ ಕಳೆದುಕೊಂಡಿರುವ ಜನರಿಗೆ ಪುನರ್ವಸತಿ ಮತ್ತು ಪರಿಹಾರ ನೀಡಬೇಕು ಎಂದು ಕೋರಿ ಜೈಬಾ ತಬಸ್ಸುಮ್ ಹಾಗೂ ಮತ್ತಿತರರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಬಂಧನ ಭೀತಿಯಿಂದ ಬೈರತಿ ಬಸವರಾಜ್ ಪಾರು: ಹೈಕೋರ್ಟ್ ಜಾಮೀನು ಮಂಜೂರು
ಒಂದು ವೇಳೆ ಅವರನ್ನು ಬಂಧಿಸಿದರೆ ಷರತ್ತುಗಳ ಆಧಾರದಡಿ ಬಿಡುಗಡೆ ಮಾಡಬೇಕು. ಬಸವರಾಜ ಅವರು ತನಿಖೆಗೆ ಸಹಕರಿಸಬೇಕು ಎಂದು ಸಿಐಡಿಗೆ ಆದೇಶಿಸಿದೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: 2 ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಆರೋಪಿ ಕೊಂಡೂರು ತರುಣ್ ರಾಜು ಅವರ ಸಂಬಂಧಿಕರು, ಸಾಹಿಲ್ ಸಕರಿಯಾ ಜೈನ್ ಅರ್ಜಿಗಳನ್ನು ಸಲ್ಲಿಸಿದ್ದರು.

Gold Smuggling Case: ನಟಿ ರನ್ಯಾ ರಾವ್ಗಿಲ್ಲ ರಿಲೀಫ್; ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974(COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧನ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು: ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಸರಿಯಲ್ಲ; ಸರ್ಕಾರಕ್ಕೆ ಹೈಕೋರ್ಟ್ ಕಿವಿಮಾತು
ಜನೌಷಧಿ ಕೇಂದ್ರಗಳು ಕಳೆದ 5ರಿಂದ 7 ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ, ಇದು ಅವುಗಳ ಅಗತ್ಯತೆಯನ್ನು ಸ್ಪಷ್ಟಪಡಿಸುತ್ತದೆ. ಯಾವುದೇ ಸಾರ್ವಜನಿಕ ಹಾನಿ ಅಥವಾ ಕಾನೂನು ಉಲ್ಲಂಘನೆ ನಡೆದಿರುವುದನ್ನು ಸರ್ಕಾರ ಸಾಬೀತುಪಡಿಸಿಲ್ಲ.

