ದೇಶಸಿಕ್ಕಿಂ, ಹಿಮಾಚಲ ಪ್ರದೇಶ ದುರಂತ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಖರ್ಗೆ ಒತ್ತಾಯ
ಸಿಕ್ಕಿಂನಲ್ಲಿ ಮೇಘ ಸ್ಪೋಟ ಹಾಗೂ ಹಠಾತ್ ಪ್ರವಾಹದಿಂದಾದ ಸಾವು ನೋವುಗಳಿಗೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿಮಾಚಲ ಪ್ರದೇಶದಲ್ಲಿ ಇತ್ತೀಚಿಗೆ ಆದ ಮಳೆ ಸಂಬಂಧಿತ ಅನಾಹುತಗಳು ಸೇರಿದಂತೆ ಇಂತಹ ದುರಂತಗಳನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.