Hoax bomb threat

ದೆಹಲಿ-ವೈಜಾಗ್ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ!
ಬಂದರು ನಗರದಲ್ಲಿ ಲ್ಯಾಂಡಿಂಗ್ ಆದ ಬಳಿಕ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ಅದು ಸುಳ್ಳು ಎಂಬುದು ತಿಳಿದುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ, ತೀವ್ರ ತಪಾಸಣೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಶೌಚಾಲಯದ ಕನ್ನಡಿ ಮೇಲೆ ವಿಮಾನ ನಿಲ್ದಾಣದೊಳಗೆ ಬಾಂಬ್ ಇರಿಸಿರುವ ಸಂದೇಶ ಬರೆಯಲಾಗಿದ್ದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.

ಬೆಂಗಳೂರು: ವಿಮಾನದಲ್ಲಿ ವಾಲೆಟ್ ಕಳೆದುಕೊಂಡ ಪ್ರಯಾಣಿಕ, ಪತ್ತೆ ಹಚ್ಚಲು ಬಾಂಬ್ ಇದೆ ಎಂದ ಭೂಪನ ಬಂಧನ!
ಸ್ಪೈಸ್‌ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದಾರೆ. ಆದರೆ ತನ್ನ ದೂರನ್ನು ಗಂಭೀರವಾಗಿ...

ರಾಜಭವನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ
ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಪತಿ ಮೇಲೆ ಸೇಡು: ಪೊಲೀಸರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳೆಯ ವಿರುದ್ಧ ಎಫ್ಐಆರ್
ಪತಿ ಮೇಲೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಆತನ ಮೊಬೈಲ್ ಸಂಖ್ಯೆಯಿಂದ ಪೊಲೀಸ್ ಅಧಿಕಾರಿಗೆ ಹುಸಿ ಬೆದರಿಕೆ ಸಂದೇಶ ಕಳುಹಿಸಿದ 32 ವರ್ಷದ ಮಹಿಳೆಯ ವಿರುದ್ಧ ನಗರ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿದ್ದಾರೆ.

ಹುಸಿಬಾಂಬ್ ಬೆದರಿಕೆ ಇಮೇಲ್: ಇಂದು ಎಂದಿನಂತೆ ಶಾಲೆ ಪುನರಾರಂಭ, 48 ಎಫ್ಐಆರ್ ದಾಖಲು
ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಬಿಗುವಿನ, ಆತಂಕದ ವಾತಾವರಣ ಸೃಷ್ಟಿಯಾಗಿ ನಿನ್ನೆ ಪೋಷಕರು ಮಕ್ಕಳನ್ನು ಅರ್ಧದಲ್ಲಿಯೇ ಬಂದು ಶಾಲೆಗಳಿಂದ ಮನೆಗೆ ಕರೆದುಕೊಂಡು ಹೋದ ಪ್ರಸಂಗ ನಡೆದಿತ್ತು.

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ, ಪತ್ತೆಹಚ್ಚಿ ಕಠಿಣ ಶಿಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳು ಮತ್ತು ನಂತರ ಮಧ್ಯಾಹ್ನವಾಗುತ್ತಿದ್ದಂತೆ ಸರ್ಕಾರಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿರುವ ಬಗ್ಗೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅಮೂಲಾಗ್ರ ತನಿಖೆ ನಡೆಸಿ ದುಷ್ಟರ ಹೆಡೆಮುರಿ ಕಟ್ಟಬೇಕು: ಎಚ್.ಡಿ ಕುಮಾರಸ್ವಾಮಿ
ಸಿಲಿಕಾನ್ ಸಿಟಿಯ ಸುಮಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಯಾವಾಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು, ಯಾವುದನ್ನೂ ಕಡೆಗಣಿಸೋಕೆ ಆಗಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
ನಗರದ ಸದಾಶಿವನಗರದಲ್ಲಿರುವ ನೀವ್ ಅಕಾಡೆಮಿ, ಬಸವೇಶ್ವರ ನಗರ, ಯಲಹಂಕ ವ್ಯಾಪ್ತಿಯಲ್ಲಿ ಸುಮಾರು 15 ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ ಬೆದರಿಕೆ ಇಮೇಲ್ ಗಳು ಬಂದವು.

