Home isolation

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ!
ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಕಿಪಾಕ್ಸ್ ರೋಗಿಯ 30 ಸಹ ಪ್ರಯಾಣಿಕರು ಮಂಗಳೂರಿನಲ್ಲಿ ಹೋಂ ಐಸೊಲೇಷನ್: ಮೈಸೂರಿನಲ್ಲೂ ತಪಾಸಣೆ ಹೆಚ್ಚಳ
ಕೇರಳದ ಕಣ್ಣೂರಿನಲ್ಲಿ 31 ವರ್ಷದ ವ್ಯಕ್ತಿಯಲ್ಲಿ ದೇಶದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳು ಗಡಿಯೊಳಗೆ ಪ್ರವೇಶಿಸುವ ಜನರ ಮೇಲೆ ತೀವ್ರ ನಿಗಾ ಇರಿಸುತ್ತಿದ್ದಾರೆ. ಸರಿಯಾಗಿ ತಪಾಸಣೆ ಮಾಡಿಯೇ ಮುಂದಕ್ಕೆ ಕಳುಹಿಸುತ್ತಿದ್ದಾರೆ.

ಓಮಿಕ್ರಾನ್ ಆತಂಕ: ಅಂತರಾಷ್ಟ್ರೀಯ ಪ್ರಯಾಣಿಕ ಸಂಪರ್ಕಿತರಿಗೆ 7 ದಿನ ಹೋಂ ಐಸೋಲೇಷನ್!
ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರೊಂದಿಗೆ ಸಂಪರ್ಕದಲ್ಲಿರುವವರನ್ನು 7 ದಿನ ಹೋಂ ಐಸೋಲೇಷನ್ ನಲ್ಲಿರಿಸಲು ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಕೇರಳದಿಂದ ಬರುವ ವಿದ್ಯಾರ್ಥಿಗಳು, ಉದ್ಯೋಗಿಗಳಿಗೆ ಶೈಕ್ಷಣಿಕ ಸಂಸ್ಥೆ ಹಾಗೂ ಅವರ ಕಚೇರಿಯಿಂದಲೇ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ!
ಗಡಿ ಹಂಚಿಕೊಂಡಿರುವ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವ ಮಂದಿಯ ಬಗ್ಗೆ ಕರ್ನಾಟಕ ಹೆಚ್ಚಿನ ಎಚ್ಚರಿಕೆ ವಹಿಸಿದೆ.

ಕೋವಿಡ್-19: ಜೀವ ರಕ್ಷಕ ಸಾಧನಗಳಿವೆ ಎಂದು ಪರಿಸ್ಥಿತಿ ಗಂಭೀರವಾದರೂ ಕಣ್ಮುಚ್ಚಿ ಕೂರದಿರಿ...!
ಆಕ್ಸಿಜನ್ ಸಿಲಿಂಡರ್ ಲಭ್ಯವಾಗುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕಿತರು ಹೋಂ ಐಸೋಲೇಷನ್ ನಲ್ಲಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲ ಜೀವ ರಕ್ಷಕ ಸಾಧನಗಳನ್ನು ಇಟ್ಟುಕೊಳ್ಳುತ್ತಿರುವ ಜನರು ಇದನ್ನೇ ನಂಬಿ ಪರಿಸ್ಥಿತಿ ಗಂಭೀರವಾದರೂ ಆಸ್ಪತ್ರೆಗಳಿಗೆ ಹೋಗದೇ ಇರುವುದು ಸಾವಿನ ಸಂಖ್ಯೆ ಏರಿಕೆಯಾಗಲು ಕಾರಣವಾಗುತ್ತಿದೆ.

ಕೋವಿಡ್-19 ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಗಳಿಂದ 'ಆ್ಯಂಟಿಬಾಡಿ ಕಾಕ್ಟೇಲ್' ಥೆರಪಿ ಪ್ರಾರಂಭ!
ಹೋಂ ಐಸೊಲೇಷನ್ ನಲ್ಲಿರುವ ಸಣ್ಣ ಹಾಗೂ ಮಧ್ಯಮ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ಲಕ್ಷಣ ಹೊಂದಿರುವವರು ಮೊನೊಕ್ಲೋನಲ್ ಆಂಟಿಬಾಡಿ ಥೆರಪಿ (ಆಂಟಿಬಾಡಿ ಕಾಕ್ಟೈಲ್) ಬಳಸಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗಳು ಅದರ ಆರಂಭಕ್ಕೆ ಮುಂದಾಗಿವೆ.

ದಾವಣಗೆರೆ: ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೋವಿಡ್ ಕೇಂದ್ರಕ್ಕೆ ದಾಖಲಾಗುವುದು ಕಡ್ಡಾಯ- ಸುಧಾಕರ್
ಹೋಂ ಐಸೋಲೇಷನ್‌ಗೊಳಗಾದ ಕೋವಿಡ್ ಸೋಂಕಿತರಿಂದಲೇ ಇತರರಿಗೂ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್‌ಗೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಕೊಳಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಎಲ್ಲರಿಗೂ ಕೋವಿಡ್ ಕೇರ್‌ನಲ್ಲೇ ಚಿಕಿತ್ಸೆ: ಡಾ. ಅಶ್ವತ್ಥ ನಾರಾಯಣ
ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಕೋವಿಡ್-19 ಸೋಂಕು ತಗುಲಿದರೆ ಏನು ಮಾಡಬೇಕು, ಹೋಂ ಐಸೊಲೇಷನ್ ನಲ್ಲಿ ಇರುವುದು ಹೇಗೆ?
ಕೋವಿಡ್ ಸೋಂಕು ತಗುಲಿ, ಹೋಂ ಐಸೊಲೇಷನ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾದವರು ನಮ್ಮ ಸುತ್ತಮುತ್ತ ಹಲವರಿದ್ದಾರೆ, ಆದರೂ ನಮ್ಮಲ್ಲಿ ಸಾಕಷ್ಟು ಮಂದಿಗೆ ಕೊರೋನಾ ಸೋಂಕು ಬಂದರೆ ಏನು ಮಾಡಬೇಕು, ನಮ್ಮ ಕುಟುಂಬದವರಿಂದ ದೂರ ಇರುವುದು ಹೇಗೆ ಎಂಬೆಲ್ಲ ಗೊಂದಲಗಳು ಸಾಕಷ್ಟು ಕಾಡುತ್ತಿವೆ.

