Home Ministry

ಭಯೋತ್ಪಾದನೆಯನ್ನು ಯಾವುದೇ ಧರ್ಮದೊಂದಿಗೆ ಜೋಡಿಸಬಾರದು: ಗೃಹ ಸಚಿವ ಅಮಿತ್ ಶಾ
ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತ ಅಪಾಯಕಾರಿ, ಇದನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಗುಂಪಿನೊಂದಿಗೆ ಜೋಡಿಸಬಾರದು ಮತ್ತು ಮಾಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

576 ಮಾತೃಭಾಷೆ ಸಮೀಕ್ಷೆ ಪೂರ್ಣ: ಕೇಂದ್ರ ಸರ್ಕಾರ
ಪ್ರತಿ ಸ್ಥಳೀಯ ಮಾತೃಭಾಷೆಯ ಅಸ್ಮಿತೆಯನ್ನು ಸಂರಕ್ಷಿಸಲು ಮತ್ತು ವಿಶ್ಲೇಷಿಸುವ ಉದ್ದೇಶದಿಂದ ದೇಶದ 576 ಮಾತೃಭಾಷೆಗಳ ಸಮೀಕ್ಷೆ ಮತ್ತು ಕ್ಷೇತ್ರೀಯ ವಿಡಿಯೊಗ್ರಫಿಯನ್ನು ಕೇಂದ್ರ ಗೃಹ ಸಚಿವಾಲಯ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಬಿಜೆಪಿಯ ಸೋನಾಲಿ ಫೋಗಟ್ ಸಾವು: ಸಿಬಿಐ ತನಿಖೆಗೆ ಆದೇಶಿಸಿದ ಕೇಂದ್ರ ಗೃಹ ಸಚಿವಾಲಯ
ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿರುವ ಬಗ್ಗೆ ವರದಿಯಾಗಿದೆ.

ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸುವಂತೆ ಎನ್ಐಎಗೆ ಗೃಹ ಸಚಿವಾಲಯ ಸೂಚನೆ
ರಾಜಸ್ತಾನದ ಉದಯಪುರದಲ್ಲಿ ದರ್ಜಿಯ ಹತ್ಯೆ ಪ್ರಕರಣವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ಹಾಗೂ ವಿಸ್ತಾರವಾಗಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ವಹಿಸಿದೆ.

ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧ ಶಿಸ್ತು ಕ್ರಮಕ್ಕೆ ಗೃಹ ಸಚಿವಾಲಯ ಶಿಫಾರಸು
ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರು ಅಧಿಕೃತ ಹುದ್ದೆಯನ್ನು ದುರುಪಯೋಗಪಡಿಸಿಕೊಂಡ ಮತ್ತು ಸಂಬಂಧಿತ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯ ಅವರ ವಿರುದ್ಧ...

ಪಶ್ಚಿಮ ಬಂಗಾಳ: ಆಲಾಪನ್ ಬಂದ್ಯೋಪಾಧ್ಯಾಯ್ ಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಗೃಹ ಸಚಿವಾಲಯದಿಂದ ನೊಟೀಸ್
ಪಶ್ಚಿಮ ಬಂಗಾಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ್ ಗೆ ಕೇಂದ್ರ ಗೃಹ ಸಚಿವಾಲಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ.

2010ರಿಂದೀಚೆಗೆ ಪಾಕ್ ಯೋಧರ ಕದನ ವಿರಾಮ ಉಲ್ಲಂಘನೆ ಪ್ರಕರಣಗಳು 60ಪಟ್ಟು ಹೆಚ್ಚಳ: ಗೃಹ ಸಚಿವಾಲಯ
ಪಾಕಿಸ್ತಾನದ ಯೋಧರು ಕಳೆದ 3 ವರ್ಷದಲ್ಲಿ 8500 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, 2010ರಿಂದೀಚೆಗೆ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಪ್ರಮಾಣ 60ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು- ರಂಗ ಪ್ರವೇಶಿಸಿದ ಅಮಿತ್ ಶಾ
ರಾಜಸ್ಥಾನ ರಾಜ್ಯ ರಾಜಕೀಯದಲ್ಲಿ ಉದ್ಭವವಾಗಿರುವ ಬಿಕ್ಕಟ್ಟು, ಈಗ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಲಡಾಖ್, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ: ಫೇಕ್ ಟ್ವೀಟ್ ಎಂದ ಕೇಂದ್ರ ಗೃಹ ಸಚಿವಾಲಯ
ಲಡಾಖ್ ಗಡಿಯಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ಏರ್ಪಟ್ಟ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ವ್ಯಾಪಕವಾಗುತ್ತಿದ್ದು, ಈ ಹಿಂದೆ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂಬ ಗೃಹ ಸಚಿವ ಅಮಿತ್ ಶಾ ಮಾಡಿದ್ದಾರೆನ್ನಲಾದ ಟ್ವೀಟ್ ನಕಲಿ ಎಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಸ್ಪಷ್ಟಪಡಿಸಿದೆ.

