ರಾಜ್ಯಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ: ಗೋವಿಂದ ಕಾರಜೋಳ
ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಹೊರ್ತಿ- ರೇವಣ್ಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.