hospital

ಕೊರೋನಾ ವಿರುದ್ಧ ಹೋರಾಡಲು ನಗರದ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಳ: ಬಿಬಿಎಂಪಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆದಂತೆ ಕೊರೋನಾ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಸೋಂಕು ನಿಯಂತ್ರಕ್ಕೆ ತರುವ ಸಲುವಾಗಿ ನಗರದ ಆಸ್ಪತ್ರೆಗಳು, ಕೋವಿಡ್ ಕೇರ್ ಕೇಂದ್ರ, ಹೋಟೆಲ್, ಹಾಸ್ಟೆಲ್ ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಒಳಗಿನವರಿಂದಲ್ಲ, ಹೊರಗಿನಿಂದ ಬರುತ್ತಿರುವ ಕೈದಿಗಳಿಂದ ಕಾರಾಗೃಹದಲ್ಲಿ ಕೊರೋನಾ ಹೆಚ್ಚುತ್ತಿದೆ!
ಒಳಗಿರುವವರಿಂದಲ್ಲ, ಹೊರಗಿನಿಂದ ಬರುತ್ತಿರುವ ಕೈದಿಗಳಿಂದ ರಾಜ್ಯದ ಕಾರಾಗೃಹಗಳಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ ಎಂದು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹೇಳಿದೆ.

ಸುಸ್ತು, ಬಳಲಿಕೆಯಲ್ಲಿರುವ ಸಿಎಂ ಯಡಿಯೂರಪ್ಪ: ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವಿಶ್ರಾಂತಿ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನಲ್ಲಿರುವ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ವಿಶ್ರಾಂತಿ ಮೊರೆಹೋಗಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ಪಾಸಿಟಿವ್ ಕಾರಣದಿಂದ ಕೋಝಿಕೋಡ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್-19: ಸಚಿನ್ ತೆಂಡೊಲ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಹೋಮ್ ಐಸೋಲೇಷನ್
ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಗೆ ವಾಪಸ್ಸಾಗಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ಅವರು ಧನ್ಯವಾದ ಸಲ್ಲಿಸಿದ್ದು, ಐಸೋಲೇಷನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿರ, ಭೀತಿಗೊಳಗಾಗುವ ಅಗತ್ಯವಿಲ್ಲ: ಅಪೋಲೋ ಆಸ್ಪತ್ರೆ
ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿರವಾಗಿದ್ದು, ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಹೈದರಾಬಾದ್: ಅಧಿಕ ರಕ್ತದೊತ್ತಡ ಕಾರಣ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು
ಅಧಿಕ ರಕ್ತದೊತ್ತಡದಿಂದ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಬೆಳಗ್ಗೆ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೈಲಿನಲ್ಲಿರುವ ನಟಿ ರಾಗಿಣಿಗೆ ಹೊಟ್ಟೆನೋವು: ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಆನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.

