hospital

ಕೊರೋನಾ ವೈರಸ್: ರಾಜ್ಯದಲ್ಲಿ ಇಬ್ಬರು ಸೋಂಕಿತರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ಕೊರೋನಾ ಭೀತಿಯಿಂದಾಗಿ ಸಾಕಷ್ಟು ಆತಂಕಕ್ಕೊಳಗಾಗಿದ್ದ ಜನತೆಗೆ ತುಸು ಸಮಾಧಾನದ ಸುದ್ದಿ ಸಿಕ್ಕಿದೆ. ಮಹಾಮಾರಿಯ ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಇಬ್ಬರು ವ್ಯಕ್ತಿಗಳು ಗುಣಮುಕರಾಗಿದ್ದು, ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ.

ಹಾಸನದಲ್ಲಿ ಕರೋನಾ ಕಾರ್ಮೋಡ: ಸೌದಿಯಿಂದ ಹಿಂದಿರುಗಿದ ಮಹಿಳೆಗೆ ಜ್ವರ
ಸೌದಿ ಅರೇಬಿಯಾದ ಮಕ್ಕಾ ಪಟ್ಟಣದಿಂದ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಅದು ಕೊರೋನಾ ಸೋಂಕು ಇರಬಹುದೇ ಎಂಬ ಆತಂಕದಿಂದ ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲೆಲ್ಲೂ ಹರಡಿದ ಕೊರೋನಾ ಭೀತಿ: ರಾಜ್ಯದೆಲ್ಲೆಡೆ ತೀವ್ರ ಕಟ್ಟೆಚ್ಚರ, ಎಲ್ಲಾ ಜಿಲ್ಲೆಗಳಿಗೂ ಮಾರ್ಗಸೂಚಿ ರವಾನೆ
ಬೆಂಗಳೂರು ಟೆಕ್ಕಿಯೊಬ್ಬರಿಗೆ ಮಾರಕ ಕೊರೋನಾ ಸೋಂಕು ದೃಢಪಟ್ಟ ಬೆನ್ನಲ್ಲೇ ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ನಿಲ್ದಾಣ, ಬಂದರು, ರೈಲು ನಿಲ್ದಾಣ, ಪ್ರಮುಖ ಬಸ್ ನಿಲ್ದಾಣ, ಪ್ರವಾಸಿ ತಾಣಗಳಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ತಗೆದುಕೊಳ್ಳಲಾಗಿದ್ದು, ವೈರಸ್ ಎದುರಿಸಲು ಆರೋಗ್ಯ ಇಲಾಕೆ ಸರ್ವಸನ್ನದ್ಧವಾಗಿ ಕಾರ್ಯನಿರ್ವಹಿಸುತ್ತಿದೆ.

ಕುರುಕ್ಷೇತ್ರ: ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅನಿಲ ಸೋರಿಕೆ, 15 ಮಂದಿ ಆಸ್ಪತ್ರೆಗೆ ದಾಖಲು
ಕುರುಕ್ಷೇತ್ರದ ಶಹ್ಬಾದ್ ಮರ್ಕಾಂಡದಲ್ಲಿರುವ ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಪರಿಣಾಮ 15 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಶಾಸಕ ಎಸ್.ಎ.ರಾಮದಾಸ್ಗೆ ಲಘು ಹೃದಯಾಘಾತ; ಶಸ್ತ್ರ ಚಿಕಿತ್ಸೆ,
ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ: ಆಸ್ಪತ್ರೆ ವೈದ್ಯರು
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯ ಸುಧಾರಿಸುತ್ತಿದೆ ಎಂದು ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಸೋನಿಯಾ ಗಾಂಧಿಗೆ ಉದರ ಸಂಬಂಧಿ ಸೋಂಕಿಗೆ ಚಿಕಿತ್ಸೆ: ಆಸ್ಪತ್ರೆ ವೈದ್ಯರು
ಅನಾರೋಗ್ಯದಿಂದ ಭಾನುವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಲ್ಲಿ ಉದರ ಸಂಬಂಧಿ ಸೋಂಕು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.

ನವದೆಹಲಿ: ಗಂಗಾ ರಾಮ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸಂಜೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚೀನಾದಲ್ಲಿ ಕರೋನ ವೈರಸ್ ಮಹಾಮಾರಿ: ಚಿಕಿತ್ಸೆ ನೀಡುತ್ತಿದ್ದ ವೈದ್ಯನೇ ಮಾರಣಾಂತಿಕ ಕಾಯಿಲೆಗೆ ಬಲಿ
ಚೀನಾದ ವುಹಾನ್ ನಗರದಲ್ಲಿ ಶನಿವಾರ ವೈದ್ಯರೊಬ್ಬರು ಕರೋನವೈರಸ್ಗೆ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

