Hospitalised

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ: ಮತ್ತೊಂದು ಸರಣಿ ಅಪಘಾತ, ಹಲವರಿಗೆ ಗಾಯ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಭಾನುವಾರ ಸಂಜೆ ಮತ್ತೊಂದು ಸರಣಿ ಅಪಘಾತ ಸಂಭವಿಸಿದೆ. ಮದ್ದೂರು ಬೈಪಾಸ್ ರಸ್ತೆಯ ಕೆ. ಕೋಡಿಹಳ್ಳಿ ಬಳಿ ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಜಯನಗರ: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!
ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲು
ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಬಹು ಅಂಗಾಂಗ ಹಾನಿಯಿಂದ ನಟ ಶರತ್ ಬಾಬು ಮತ್ತೆ ಆಸ್ಪತ್ರೆಗೆ ದಾಖಲು
ಕನ್ನಡದ ಅಮೃತ ವರ್ಷಿಣಿ ಸಿನಿಮಾದ ಅಭಿನಯಕ್ಕಾಗಿ ಮೆಚ್ಚುಗೆಗೆ ಪಾತ್ರವಾಗಿದ್ದ ಬಹುಭಾಷಾ ನಟ ಹಾಗೂ ಕೊನೆಯದಾಗಿ ವಸಂತ ಮುಲ್ಲೈ (2023) ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ: ಚಿಕಿತ್ಸೆಯ ಮಧ್ಯದಲ್ಲೇ ಎಚ್ ಡಿಕೆ ಚುನಾವಣಾ ಕಾರ್ಯತಂತ್ರ !
ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

ನಿಶ್ಯಕ್ತಿಯಿಂದ ಬಳಲುತ್ತಿದ್ದ ಎಚ್‌ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಚೇತರಿಸಿಕೊಳ್ಳುತ್ತಿದ್ದಾರೆ ಎಂದ ವೈದ್ಯರು
ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ 'ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಭಾನುವಾರ ತಿಳಿಸಿದೆ.

ತೀವ್ರ ಜ್ವರ, ನಿಶ್ಯಕ್ತಿಯಿಂದ ಬಳಲುತ್ತಿರುವ ನಟಿ ಖುಷ್ಬೂ ಸುಂದರ್, ಹೈದರಾಬಾದಿನ ಆಸ್ಪತ್ರೆಗೆ ದಾಖಲು
ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.

ಚೆನ್ನೈ: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲು
ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮಿಳು ನಟ ಪ್ರಭು ಗಣೇಶನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ತಮಿಳು ನಟ ಪ್ರಭು ತೆಲುಗು, ಕನ್ನಡ ಸೇರಿದಂತೆ ಸೌತ್ ಸಿನಿಮಾ ಪ್ರೇಕ್ಷಕರಿಗೆ ಪರಿಚಿತರು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಖ್ಯಾತ ನಟ ಪ್ರಭು ಆಸ್ಪತ್ರೆಗೆ ದಾಖಲಾಗಿದ್ದಾರೆ.

