house

ಕರ್ಫ್ಯೂ ಉಲ್ಲಂಘಿಸಿ ಮಣಿಪುರ ಸಿಎಂ ಮನೆ ಮೇಲೆ ದಾಳಿಗೆ ಗುಂಪು ಯತ್ನ; ಭದ್ರತಾ ಪಡೆಗಳಿಂದ ತಡೆ
ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ.

ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!
ಗಾಯಕ ಸೋನು ನಿಗಮ್ ತಂದೆ ಆಗಮ್ ಕುಮಾರ್ ನಿಗಮ್ ಅವರ ಮನೆಯಲ್ಲಿ ಬರೋಬ್ಬರಿ 72 ಲಕ್ಷ ರೂ ಕಳ್ಳತನವಾಗಿದೆ. 72 ಲಕ್ಷ ರೂ ಕದ್ದ ಆರೋಪದ ಮೇಲೆ ಅವರ ಮಾಜಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲಿ ಸಿದ್ದರಾಮಯ್ಯಗಾಗಿ ವಾಸ್ತು ಪ್ರಕಾರ ಮನೆ, ಕಚೇರಿಗಾಗಿ ಹುಡುಕಾಟ!
ರಾಜ್ಯ ವಿಧಾನಸಭೆ ಚುನಾವಣೆ 2023ರಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗಾಗಿ ಕಾಂಗ್ರೆಸ್ ಮುಖಂಡರು ಕೋಲಾರದಲ್ಲಿ ವಾಸ್ತು ಇರುವ ಮನೆ ಹಾಗೂ ಕಚೇರಿಗಾಗಿ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಮಂಗಳೂರು ಸ್ಫೋಟ ಪ್ರಕರಣ: ಆರೋಪಿ ಶಾರೀಕ್, ಸಂಬಂಧಿಕರ ನಿವಾಸದ ಮೇಲೆ ಪೊಲೀಸರ ದಾಳಿ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿದಂತೆ ತೀರ್ಥಹಳ್ಳಿಯಲ್ಲಿ ಆರೋಪಿ ಶಾರೀಖ್ ಹಾಗು ಆತನ ಸಂಬಂಧಿಕರ ನಿವಾಸಗಳ ಮೇಲೆ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ.

ಭಗತ್ ಸಿಂಗ್ ನಿವಾಸಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿಲ್ಲ; ಪಂಜಾಬ್ ಸರ್ಕಾರ
ಭಗತ್ ಸಿಂಗ್ ನಿವಾಸಕ್ಕೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿಲ್ಲ ಎಂದು ಪಂಜಾಬ್ ಸರ್ಕಾರ ಹೇಳಿದೆ.

ಭೂಮಿ, ಕಟ್ಟಡ, ಕೊನೆಗೆ ಮನೆ: ಅಭಿವೃದ್ಧಿಗಾಗಿ ಎಲ್ಲವನ್ನೂ ದಾನ ಮಾಡಿರುವ ಕೇರಳದ ಕುಟುಂಬವಿದು...
ಸಾಮಾಜಿಕ ಸ್ಥಾನಮಾನವನ್ನು ಆಸ್ತಿಗಳ ಆಧಾರದಲ್ಲಿ ಅಳೆಯುವ, ಸಮಾಜದಲ್ಲಿ ಕೇರಳದ ಕುಟುಂಬವೊಂದು ತಮ್ಮದೆಲ್ಲವನ್ನೂ ಅಭಿವೃದ್ಧಿಗಾಗಿ ನೀಡಿ ಅಚ್ಚರಿ ಮೂಡಿಸಿದೆ.

ವ್ಯಾಪಕ ಮಳೆಯಿಂದ ಸಂಪೂರ್ಣವಾಗಿ ಮಳೆ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ
ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪುಸ್ತಕ ವಿವಾದ ನಡುವೆ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ನಿವಾಸಕ್ಕೆ ಬೆಂಕಿ, ಧ್ವಂಸ
ಅಯೋಧ್ಯೆ ತೀರ್ಪು ಕುರಿತ ಪುಸ್ತಕ ವಿವಾದದ ಕಿಡಿ ಹೊತ್ತಿಸಿರುವ ನಡುವೆ ಸೋಮವಾರ ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿ, ಧ್ವಂಸ ಮಾಡಲಾಗಿದೆ.

ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳಾಯ್ತು... ಬಸವರಾಜ ಹೊರಟ್ಟಿಗೆ ಇನ್ನೂ ಸಿಕ್ಕಿಲ್ಲ ಅಧಿಕೃತ ಸರ್ಕಾರಿ ನಿವಾಸ!
ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳು ಕಳೆದರೂ ಬಸವರಾಜ ಹೊರಟ್ಟಿಯವರಿಗೆ ಸರ್ಕಾರದ ಅಧಿಕೃತ ನಿವಾಸ ದೊರೆತಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ.

