HUBBALLI

ಕೆಐಎ ಬೆಳವಣಿಗೆ ಶೇ.23.3 ಕ್ಕೆ ಏರಿಕೆ: ಮಂಗಳೂರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಬೆಳವಣಿಗೆಯೂ ಏರುಗತಿಯಲ್ಲಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಈ ಆರ್ಥಿಕ ವರ್ಷದ ಮೊದಲ ಮೂರು ತ್ರೈಮಾಸಿಕಗಳಲ್ಲಿ ಶೇ.23.3 ರಷ್ಟು ಬೆಳವಣಿಗೆ ದಾಖಲಿಸಿದೆ.

ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬಿಜೆಪಿಗೆ ವಾಪಸ್ ಆಗಿರುವ ಜಗದೀಶ್ ಶೆಟ್ಟರ್ ಅವರ ಬೆನ್ನಲ್ಲೇ ಲಕ್ಷ್ಮಣ ಸವದಿ, ಗಾಲಿ ಜನಾರ್ದನ ರೆಡ್ಡಿ ಅವರೂ ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಸಂಭ್ರಮ: ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಮರಿಂದ ರಾಮನಾಮ ಜಪತಪ!
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ನಿಮಿತ್ತ ಹುಬ್ಬಳ್ಳಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ವಿಶಿಷ್ಠವಾಗಿ ರಾಮೋತ್ಸವ ಆಚರಿಸಲಾಗಿದ್ದು, ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಂದೆಡೆ ಸೇರಿ ಶ್ರೀರಾಮನನ್ನು ಪೂಜಿಸಿ, ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

ಪ್ರಹ್ಲಾದ್ ಜೋಶಿ ವಿರುದ್ಧ ಭ್ರಷ್ಟಾಚಾರ ಆರೋಪ: ಹುಬ್ಬಳ್ಳಿಯ ಎಂಟಿಎಸ್ ಕಾಲೋನಿಯ ಲೀಸ್ ಟೆಂಡರ್ ರದ್ದು
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಮಾಡಿದ ಬೆನ್ನಲ್ಲೇ ಹುಬ್ಬಳ್ಳಿಯ ಎಂಟಿಎಸ್ ಕಾಲೋನಿಯ 13 ಎಕರೆ ಜಮೀನಿನ ಟೆಂಡರ್ ಪ್ರಕ್ರಿಯೆಯನ್ನು ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರ(RLDA) ಕೊನೆಗೂ...

ಸೈಬರ್ ವಂಚನೆ; ಅಧಿಕ ಲಾಭದ ಆಮಿಷಕ್ಕೆ ಸಿಲುಕಿ 1.8 ಕೋಟಿ ರೂ. ಕಳೆದುಕೊಂಡ ಧಾರವಾಡದ ವೈದ್ಯ
ಧಾರವಾಡದ 45 ವರ್ಷದ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದು, ಬರೋಬ್ಬರಿ 1.79 ಕೋಟಿ ರೂ. ಕಳೆದುಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ವೈದ್ಯರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ವಂಚನೆ ನಡೆದಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಾವೇರಿ ನೈತಿಕ ಪೊಲೀಸ್‌ಗಿರಿ ಪ್ರಕರಣ: ಹಣದ ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನ- ಮಾಜಿ ಸಿಎಂ ಬೊಮ್ಮಾಯಿ
ಹಾವೇರಿಯ ನೈತಿಕ ಪೊಲೀಸ್‌ಗಿರಿ ಪ್ರಕರಣವನ್ನು ಸಂತ್ರಸ್ತರಿಗೆ ಹಣ ನೀಡುವ ಮೂಲಕ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಆರೋಪಿಸಿದ್ದಾರೆ.

ಕೇಂದ್ರದ ನೆರವಿನ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿ: ಕರ್ನಾಟಕ ಸರ್ಕಾರಕ್ಕೆ ಸಚಿವ ಪ್ರಹ್ಲಾದ್ ಜೋಶಿ ಸೂಚನೆ
ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದಿರುವ ಅನುದಾನ ಮತ್ತು ಈಗ ಕಾಂಗ್ರೆಸ್ ಸರ್ಕಾರ ಪಡೆದಿರುವ ಹಣದ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

1992ರ ಗಲಭೆ ಪ್ರಕರಣ: ಹುಬ್ಳಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ, ಹಿಂದೂಪರ ಸಂಘಟನೆಗಳ ಆಕ್ರೋಶ
ಹುಬ್ಬಳ್ಳಿ-ಧಾರವಾಡ ಪೊಲೀಸರು ಡಿಸೆಂಬರ್ 1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಿದ್ದು, ಪೊಲೀಸರ ಕ್ರಮಕ್ಕೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ: ಮೂರು ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ!
ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದೆ.

