HUBBALLI

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅನುಮತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ, ಗೃಹ ಸಚಿವರು ಹೇಳಿದ್ದು ಹೀಗೆ...
ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ: 23 ಪಾರಿವಾಳಗಳ ಕುತ್ತಿಗೆ ಕೊಯ್ದು ಕೊಂದ ದುಷ್ಕರ್ಮಿಗಳು; ಹಳೆ ವೈಷಮ್ಯ ಕಾರಣ!
ಹುಬ್ಬಳ್ಳಿ ನಗರದಲ್ಲಿ ಹಳೆ ವೈಷಮ್ಯದಿಂದಾಗಿ ದುಷ್ಕರ್ಮಿಗಳು 23 ಪಾರಿವಾಳಗಳನ್ನು ಕೊಂದಿರುವ ಮನಕಲಕುವ ಘಟನೆ ನಡೆದಿದೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಯಾವಗಲ್ ಬಡಾವಣೆಯ ಮನೆಯೊಂದರಲ್ಲಿ ಶನಿವಾರ ಈ ಘಟನೆ ನಡೆದಿದೆ.

ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ: ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ
ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಶುಕ್ರವಾರ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ತಾವು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಪ್ರಚೋದನಕಾರಿ ಹೇಳಿಕೆ: ಮುತಾಲಿಕ್ ಗಡಿಪಾರಿಗೆ ಎಸ್‌ಡಿಪಿಐ ಆಗ್ರಹ
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರ ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ: ಗೃಹ ಸಚಿವ ಪರಮೇಶ್ವರ್
ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ. ಇದು ಇಲ್ಲದಂತೆ ಮಾಡಲು 3 ತಿಂಗಳ ಗಡುವು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ವಿಚಾರ; ಸರ್ಕಾರದ ಪಾತ್ರವಿಲ್ಲ ಎಂದ ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿರ್ಧಾರವನ್ನು ಅಲ್ಲಿನ ಪಾಲಿಕೆ ಕೈಗೊಳ್ಳಲಿದ್ದು, ಇದರಲ್ಲಿ ಸರ್ಕಾರದ ಪಾತ್ರವಿರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯ
ಗಣೇಶ ಚತುರ್ಥಿ ಹಬ್ಬ ಹತ್ತಿರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಬೇಕೆಂಬ ಆಗ್ರಹಗಳು ವ್ಯಕ್ತವಾಗತೊಡಗಿವೆ.

'ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳು ವಿಫಲವಾಗುತ್ತವೆ': ದಿಗ್ವಿಜಯ್ ಸಿಂಗ್
ಜನರು ಕಾಂಗ್ರೆಸ್‌ಗೆ ಭಾರಿ ಜನಾದೇಶ ನೀಡಿರುವುದರಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಕೈಗೊಳ್ಳುವ ಬಿಜೆಪಿಯ ಯಾವುದೇ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಹೇಳಿದ್ದಾರೆ.

ತ್ರಿವರ್ಣ ಧ್ವಜದಂತೆಯೇ ಹುಬ್ಬಳ್ಳಿಯ ರಾಷ್ಟ್ರಧ್ವಜ ತಯಾರಿಕಾ ಘಟಕ ಉದ್ಯಮದಲ್ಲಿ ಉತ್ತುಂಗಕ್ಕೆ!
ಹುಬ್ಬಳ್ಳಿಯಲ್ಲಿರುವ ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು ನಡೆಸುವ ಗುರಿ ಹೊಂದಿದೆ.

