ICC World Cup 2023

ಐಸಿಸಿ ವಿಶ್ವಕಪ್ ಫೈನಲ್: ಅಹಮದಾಬಾದಿನ ಹೋಟೆಲ್ ರೂಮ್ ದರ ಕೇಳಿದ್ರೆ ಶಾಕ್ ಆಗ್ತೀರಾ!
ಭಾನುವಾರ ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ- ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಐಸಿಸಿ ವಿಶ್ವಕಪ್ ಫೈನಲ್ ಕಾದಾಟ ವೀಕ್ಷಿಸಲು ನಗರಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು, ಹೋಟೆಲ್ ಹಾಗೂ ವಿಮಾನ ಪ್ರಯಾಣದ ದರ ಗಗನಕ್ಕೇರಿದೆ.

ವಿಶ್ವಕಪ್ ಕ್ರಿಕೆಟ್: ಫೈನಲ್ ನಲ್ಲಿ ಭಾರತ ಗೆದ್ದರೆ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವೆ: ತೆಲುಗು ನಟಿ ಹೇಳಿಕೆ!
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತ ತಂಡ ಗೆದ್ದರೆ ವಿಶಾಖಪಟ್ಟಣಂ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವುದಾಗಿ ತೆಲುಗಿನ ನಟಿಯೊಬ್ಬರು ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ.

ವಿಶ್ವಕಪ್ ಕ್ರಿಕೆಟ್: ಭಾರತೀಯ ಸ್ಪಿನ್ನರ್ ಗಳಿಗೆ ನೆರವಾಗುವಂತೆ ಪಿಚ್ ಬದಲಾಯಿಸಲಾಗುತ್ತಿದೆಯೇ? ಗವಾಸ್ಕರ್ ಹೇಳಿದ್ದು ಹೀಗೆ...
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಸ್ಪಿನ್ನರ್ ಗಳಿಗೆ ಅನುಕೂಲವಾಗುವಂತೆ ಮೈದಾನದ ಪಿಚ್ ಬದಲಾಯಿಸಲಾಗುತ್ತಿದೆ ಎಂಬಂತಹ ವರದಿಗಳ ವಿರುದ್ಧ ಭಾರತದ ಕ್ರಿಕೆಟ್ ಲೆಜೆಂಡರಿ ಸುನೀಲ್ ಗವಾಸ್ಕರ್ ಕಿಡಿಕಾರಿದ್ದಾರೆ.

ವಿರಾಟ್ ಕೊಹ್ಲಿ ದಾಖಲೆಗಳು ಇನ್ನೂ ಮುಗಿದಿಲ್ಲ: ಸೌರವ್ ಗಂಗೂಲಿ, ರವಿಶಾಸ್ತ್ರೀ
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಏಕದಿನ ಕ್ರಿಕೆಟ್ ನಲ್ಲಿ 50 ನೇ ಶತಕ ದಾಖಲಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಅವರ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿಯ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್! ಅಭಿಮಾನಿಗಳು ಹೇಳಿದ್ದು ಹೀಗೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾದರು.

ಐಸಿಸಿ ವಿಶ್ವಕಪ್: ಶ್ರೇಯಸ್, ರಾಹುಲ್ ಭರ್ಜರಿ ಶತಕ, ನೆದರ್ಲ್ಯಾಂಡ್ಸ್ ಗೆ 411 ರನ್ ಗಳ ಗುರಿ ನೀಡಿದ ಭಾರತ
ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದೆ.

ರೋಹಿತ್ ಶರ್ಮಾ ನಾಯಕತ್ವದ ಜೊತೆಗೆ ಆರಂಭಿಕನಾಗಿ ಅದ್ಬುತ ಬ್ಯಾಟಿಂಗ್: ರಾಹುಲ್ ದ್ರಾವಿಡ್
ರೋಹಿತ್ ಶರ್ಮಾ ಅವರ ನಾಯಕತ್ವದ ಜೊತೆಗೆ ಆರಂಭಿಕನಾಗಿ ಅದ್ಬುತ ಬ್ಯಾಟಿಂಗ್ ನಿಂದಾಗಿ ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ಎಂಟು ಪಂದ್ಯಗಳನ್ನು ಗೆದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಶನಿವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ICC Cricket World Cup Semi-Final 2023: ಪಾಕಿಸ್ತಾನ ಮನೆಗೆ, ಸೆಮಿಫೈನಲ್ ಪಂದ್ಯಗಳನ್ನು ಪ್ರಕಟಿಸಿದ ಐಸಿಸಿ!
ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.

ಐಸಿಸಿ ಏಕದಿನ ವಿಶ್ವಕಪ್: ಇಲ್ಲಿಯವರೆಗೂ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳು- PHOTOS
ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೌಲರ್‌ಗಳ ಸ್ಮರಣೀಯ ಪ್ರದರ್ಶನಗಳಿಗೆ ಸಾಕ್ಷಿಯಾಗಿದೆ. ಇಲ್ಲಿಯವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಬಗ್ಗೆ ನೋಡೋಣ.

