ICC World Cup 2023

ಐಸಿಸಿ ವಿಶ್ವಕಪ್ 2023: ಪಾಕಿಸ್ತಾನ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ಐಸಿಸಿ ವಿಶ್ವಕಪ್ 2023: ಭಾರತ- ಪಾಕ್ ಪಂದ್ಯ, ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಜನಸಾಗರ, ಗೆಲುವಿಗಾಗಿ ಪ್ರಾರ್ಥನೆ
ಐಸಿಸಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಿಂದಾಗಿ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಜನಸಾಗರವೇ ಕಂಡುಬಂದಿತು. ಅಭಿಮಾನಿಗಳು ಭಾರತ ತಂಡವನ್ನು ಹುರಿದುಂಬಿಸಲು ಸಜ್ಜಾಗಿದ್ದಾರೆ.

ಪರಸ್ಪರ ಹಸ್ತಲಾಘವ, ಅಪ್ಪುಗೆ: ಐಪಿಎಲ್ ಗಲಾಟೆ ಮರೆತು ಒಂದಾದ ಕೊಹ್ಲಿ- ನವೀನ್ ಉಲ್ ಹಕ್!
ಐಪಿಎಲ್ ನಲ್ಲಿ ಶುರುವಾಗಿದ್ದ ಭಾರತ ತಂಡದ ವಿರಾಟ್ ಕೊಹ್ಲಿ ಮತ್ತು ಆಫ್ಘಾನಿಸ್ತಾನದ ವೇಗಿ ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಂತ್ಯವಾಗಿದ್ದು ಇಬ್ಬರೂ ಆಟಗಾರರೂ ಪರಸ್ಪರ ಹಸ್ತಲಾಘವ ಮಾಡಿಕೊಂಡು ನಗು ಚೆಲ್ಲಿ ಮುನಿಸು ಮರೆತಿದ್ದಾರೆ.

ಭಾರತ-ಅಫ್ಘಾನಿಸ್ತಾನ ಪಂದ್ಯದ ವೇಳೆ ಮೈದಾನದಲ್ಲೇ ಕೈ-ಕೈ ಮಿಲಾಯಿಸಿದ ಫ್ಯಾನ್ಸ್
ಐಪಿಎಲ್ ನಲ್ಲಿ ಶುರುವಾಗಿದ್ದ ವಿರಾಚ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರುವಂತೆಯೇ ಇತ್ತ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.

ಐಸಿಸಿ ವಿಶ್ವಕಪ್ 2023: ಭಾರತ ಗೆಲ್ಲಲು 273 ರನ್ ಗಳ ಗುರಿ ನೀಡಿದ ಅಪ್ಘಾನಿಸ್ತಾನ!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ, ಭಾರತ ಗೆಲ್ಲಲು 273 ರನ್ ಗಳ ಗುರಿ ನೀಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 272 ರನ್ ಕಲೆಹಾಕಿತು.

ಐಸಿಸಿ ವಿಶ್ವಕಪ್ 2023 ಅಧಿಕೃತ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 5 ರಿಂದ ಪ್ರಾರಂಭ; 15ಕ್ಕೆ ಭಾರತ-ಪಾಕ್ ಪಂದ್ಯ
ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ.

