ICMR

ಕೋವಿಡ್-19: ಭಾರತದಲ್ಲಿಂದು 1.52 ಲಕ್ಷ ಕೇಸ್ ಪತ್ತೆ, 50 ದಿನಗಳಲ್ಲೇ ಅತಿ ಕಡಿಮೆ!
ಭಾರತದಲ್ಲಿ ಕೊರೋನಾ 2ನೇ ಅಲೆ ಅಬ್ಬರ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,52,734 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಇದು ಕಳೆದ 50 ದಿನಗಳಲ್ಲಿಯೇ ಕನಿಷ್ಟ ಸಂಖ್ಯೆಯಾಗಿದೆ. ಇದೇ ವೇಳೆ ಒಂದೇ ದಿನ 3,128 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19; ಒಂದೇ ದಿನ 1.65 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 3,460 ಸಾವು!
ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1.65ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 3,460 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 1.73 ಲಕ್ಷ ಕೇಸ್ ಪತ್ತೆ, 3,617 ಮಂದಿ ಸಾವು
ಭಾರತದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 1,73,790 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ 45 ದಿನಗಳಲ್ಲೇ ಕನಿಷ್ಠವಾಗಿದೆ. ಇದೇ ವೇಳೆ ಶನಿವಾರ 3,617 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿ ಇಂದು 1.86 ಲಕ್ಷ ಹೊಸ ಕೇಸ್ ಪತ್ತೆ; 3,847 ಮಂದಿ ಸೋಂಕಿನಿಂದ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ 1,86,364 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 44 ದಿನಗಳ ಬಳಿಕ ದೈನಂದಿನ ಕೊರೋನಾ ಪ್ರಕರಣ ಭಾರೀ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಕೋವಿಡ್-19: ಭಾರತದಲ್ಲಿಂದು 2.11 ಲಕ್ಷ ಹೊಸ ಕೇಸ್ ಪತ್ತೆ, 3,847 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 2,11,298 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,847 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯಗಳ ಬಳಿ ಇನ್ನೂ 1.77 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.77 ಕೋಟಿ ಡೋಸ್ ಕೋವಿಡ್ ಲಸಿಕೆ ದಾಸ್ತಾನಿದ್ದು, ಮುಂದಿನ ದಿನಗಳಲ್ಲಿ ಇನ್ನೂ 1 ಲಕ್ಷ ಡೋಸ್ ಲಸಿಕೆ ಸರಬರಾಜು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ ಒಂದೇ ದಿನ 2.08 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 4,157 ಸಾವು!
ದೇಶಾದ್ಯಂತ ಒಂದೇ ದಿನ 2.08 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4,157 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ತಗ್ಗಿದ ಕೊರೋನಾ ಅಲೆ: ಸೋಂಕು ಪಾಸಿಟಿವಿಟಿ ಪ್ರಮಾಣ ಶೇ.9.54ಕ್ಕೆ ಇಳಿಕೆ
ದೇಶದಲ್ಲಿ ವ್ಯಾಪಕವಾಗಿ ಅಬ್ಬರಿಸಿದ್ದ ಕೊರೋನಾ ಸಾಂಕ್ರಾಮಿಕದ 2ನೇ ಅಲೆ ಇದೀಗ ತಗ್ಗಿದ್ದು, ಸೋಂಕು ಸಕಾರಾತ್ಮಕ ದರ ಶೇ.9.54ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 1.96 ಲಕ್ಷ ಹೊಸ ಕೇಸ್ ಪತ್ತೆ, 3,511 ಮಂದಿ ಸಾವು
ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,96,427 ಜನರಲ್ಲಿ ಸೋಂಕು ದೃಢಪಟ್ಟಿದ್ದು, 3,511 ಮಂದಿ ಸಾವನ್ನಪ್ಪಿದ್ದಾರೆ.

