ICMR

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 2.63 ಲಕ್ಷ ಹೊಸ ಕೇಸ್ ಪತ್ತೆ, 4,349 ಮಂದಿ ಸಾವು
ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,63,533 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 28 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ.

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 2.81 ಲಕ್ಷ ಹೊಸ ಕೇಸ್ ಪತ್ತೆ, 4,106 ಮಂದಿ ಸಾವು
ದೇಶದಲ್ಲಿ ಸೋಮವಾರ 2,81,386 ಕೊರೋನಾ ವೈರಸ್ ಪ್ರಕರಣ ದಾಖಲಾಗಿದ್ದು, ಇದು 26 ದಿನಗಳ ಕನಿಷ್ಠ ಎನಿಸಿಕೊಂಡಿದೆ. ಇದು ಸೋಂಕು ಇಳಿಕೆಯ ಸಂಕೇತ ಎಂದು ವಿಶ್ಲೇಷಿಸಲಾಗುತ್ತಿದೆ. ಆಧರೆ, ಸಾವಿನ ಸಂಖ್ಯೆ ಮಾತ್ರ ಇಳಿಯುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ 4,106 ಮಂದಿ ಸಾವನ್ನಪ್ಪಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 3.11 ಲಕ್ಷ ಹೊಸ ಕೇಸ್ ಪತ್ತೆ, 4,077 ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,11,170 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4,077ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಅಪಾಯಕಾರಿ ಬ್ಲ್ಯಾಕ್ ಫಂಗಸ್ ವಿರುದ್ಧ ಮುನ್ನೆಚ್ಚರಿಕೆ ಹೇಗೆ? ಐಸಿಎಂಆರ್ ನೀಡಿದ ಸಲಹೆಗಳು...
ಕೋವಿಡ್ ಸೋಂಕಿತರಿಗೆ ಅಪಾಯಕಾರಿ ಪರಿಣಮಿಸುತ್ತಿರುವ ಬ್ಲ್ಯಾಕ್ ಫಂಗಸ್ ಕುರಿತಂತೆ ಐಸಿಎಂಆರ್ ಮಾರ್ಗಸೂಚಿ ಮತ್ತು ಸಲಹೆಗಳನ್ನು ಬಿಡುಗಡೆ ಮಾಡಿದೆ.

ಭಾರತದಲ್ಲಿ ಕೊರೋನಾ ಸ್ವಲ್ಪ ಇಳಿಕೆ: ದೇಶದಲ್ಲಿಂದು 3.26 ಲಕ್ಷ ಹೊಸ ಕೇಸ್ ಪತ್ತೆ, 3,890 ಮಂದಿ ಸಾವು
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಾ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಭಾರತದಲ್ಲಿಂದು 3,26,098 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3,890 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೋವಿಡ್-19: ಭಾರತದಲ್ಲಿಂದು 3.43 ಲಕ್ಷ ಹೊಸ ಕೇಸ್ ಪತ್ತೆ, 4 ಸಾವಿರ ಮಂದಿ ಸಾವು
ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದ 29 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಹೆಚ್ಚು: ಸರ್ಕಾರ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಶೇಕಡಾ 10 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೊಂದಿರುವ ಜಿಲ್ಲೆಗಳು ಇನ್ನೂ ಆರರಿಂದ ಎಂಟು ವಾರಗಳವರೆಗೆ ಲಾಕ್ ಡೌನ್ ಆಗಿರಬೇಕು ಎಂದು ಎಚ್ಚರಿಸಿದ್ದಾರೆ.

ಶೇ.10ಕ್ಕಿಂತ ಹೆಚ್ಚು ಕೊರೋನಾ ಪಾಸಿಟಿವಿಟಿ ಪ್ರಮಾಣ ಹೊಂದಿರುವ ಜಿಲ್ಲೆಗಳಲ್ಲಿ ಕಡ್ಡಾಯ ಲಾಕ್ ಡೌನ್ ಮಾಡಬೇಕು: ಐಸಿಎಂಆರ್
ಶೇ.10ಕ್ಕಿಂತ ಹೆಚ್ಚು ಕೋವಿಡ್-19 ಸೋಂಕು ಸಕಾರಾತ್ಮಕ ದರ ಹೊಂದಿರುವ ನಗರಗಳಲ್ಲಿ ಕಡ್ಡಾಯ ಲಾಕ್ ಡೌನ್ ಮಾಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 3.62 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 4,120 ಮಂದಿ ಸಾವು!
ದೇಶಾದ್ಯಂತ ಮತ್ತೆ 3.62 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4,120 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

