Idgah Maidan

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇನ್ನು ಮುಂದೆ ಎಲ್ಲಾ ಹಬ್ಬವೂ ನಡೆಯಲಿದೆ ಎಂದ ಪಿ.ಸಿ. ಮೋಹನ್, ಗರಂ ಆದ ಜಮೀರ್ ಅಹ್ಮದ್
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೈದಾನದಲ್ಲಿ ಎಲ್ಲಾ ಹಬ್ಬವೂ ಆಚರಿಸಲಾಗುತ್ತದೆ ಎಂದು ಸಂಸದ ಪಿ.ಸಿ. ಮೋಹನ್ ಅವರು ಗುರುವಾರ ಹೇಳಿದರು.

ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ: ಧ್ವಜಾರೋಹಣ ನೆರವೇರಿಸಿದ ಡಾ.ಶಿವಣ್ಣ
ನಗರದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿದೆ ಗಣರಾಜ್ಯೋತ್ಸವವನ್ನು ಆಚರಿಸಲಾಗಿದ್ದು, ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ.ಎಂಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ
ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿಯು ಇದೀಗ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಥತೆಗಳ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ: ಹಿಂದೂ ಕಾರ್ಯಕರ್ತರು
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಇತರೆ ಹಿಂದೂಪರ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಣೆ
ನಾಡಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಿಸಲಾಯಿತು.

ಗಣೇಶೋತ್ಸವ ಆಚರಣೆ ಬಳಿಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಹೋಳಿ ಹಬ್ಬದ ಸಂಭ್ರಮಕ್ಕೆ ಸಿದ್ಧತೆ ಶುರು
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಉಂಟಾಗಿರುವ ಗಲಾಟೆ ಈ ಬಾರಿಯ ಗಣೇಶ ಹಬ್ಬದೊಂದಿಗೆ ಕೊನೆಯಾಗುವ ಸಾಧ್ಯತೆ ಕಾಣುತ್ತಿಲ್ಲ. ಈಗ ಅದೇ ಸ್ಥಳದಲ್ಲಿ ಹೋಳಿ ಹಬ್ಬಕ್ಕೆ ಹೋಳಿ ಕಾಮಣ್ಣನ ಪ್ರತಿಷ್ಠಾಪನೆಗೆ ಹಿಂದೂ ಸಂಘಟನೆಗಳು ಅನುಮತಿ ನೀಡಬೇಕೆಂದು ಒತ್ತಾಯಿಸಿವೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ: ಮೂರು ದಿನ ವಿಗ್ರಹ ಇಡಲು ಅನುಮತಿ
ನಾನಾ ಊಹಾಪೋಹಗಳ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕೋಮು ಸೂಕ್ಷ್ಮ ಪ್ರದೇಶ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಅನುಮತಿ ಕೋರಿರುವ ಆರು ಸಂಸ್ಥೆಗಳ ಪೈಕಿ ಒಂದಕ್ಕೆ ಮೂರು ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗುತ್ತದೆ.

ಈದ್ಗಾ ಮೈದಾನ ವಿವಾದ: ಹಿಂದೂ ಸಂಘಟನೆಗಳೊಂದಿಗೆ ಶಾಂತಿ ಸಭೆ ನಡೆಸಿದ ಪೊಲೀಸರು
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ಪೊಲೀಸರು ಮಂಗಳವಾರ ಹಲವು ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದರು.

ಈದ್ಗಾ ಮೈದಾನಕ್ಕೆ ಚಾಮರಾಜೇಂದ್ರ ಒಡೆಯರ್ ಹೆಸರಿಡಿ: ಸಂಸದ ಪಿ.ಸಿ.ಮೋಹನ್
ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ.

