ರಾಜ್ಯಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ; ದ್ವೇಷ ಸೃಷ್ಟಿಸಲು ಬಯಸುವವರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದ ಸಿಎಂ
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್-ಅಲ್-ಅಧಾ ಹಬ್ಬವನ್ನು ಇಂದು ಗುರುವಾರ ದೇಶಾದ್ಯಂತ ಬಕ್ರೀದ್ ಎಂದು ಭಕ್ತಿ, ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜೊತೆಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.