ರಾಜ್ಯಮೈತ್ರಿಯಿಂದ ಜೆಡಿಯು ಹೊರಬರುವ ಬಗ್ಗೆ ನನಗೆ ಮಾಹಿತಿ ಇಲ್ಲ, ನಾವು ಒಗ್ಗೂಡಿದರೆ ಪ್ರಜಾಪ್ರಭುತ್ವ ಉಳಿಯುತ್ತದೆ: ಮಲ್ಲಿಕಾರ್ಜುನ ಖರ್ಗೆ
ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ. ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.