ದೇಶಉತ್ತರ ಪ್ರದೇಶದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಐಐಟಿ ಮದ್ರಾಸ್ ಅಧ್ಯಾಪಕರಿಂದ ವಿಶೇಷ ತರಗತಿ!
ಉತ್ತರ ಪ್ರದೇಶದ ಮೂಲ ಶಿಕ್ಷಣ ಇಲಾಖೆಯು ಐಐಟಿ ಮದ್ರಾಸ್ನೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಇದರಡಿ ಅದರ ಅಧ್ಯಾಪಕರು ವಾರಣಾಸಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಆನ್ಲೈನ್ ತರಗತಿ ನಡೆಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವಿದ್ಯಾ ಶಕ್ತಿ ಪ್ರಾಜೆಕ್ಟ್ ಅಡಿಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.