ರಾಜ್ಯILI, SARI ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ, ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸೂಚನೆ: ಡಾ.ಕೆ.ಸುಧಾಕರ್
ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.