ದೇಶಮಧ್ಯಪ್ರದೇಶ: ಫ್ರಿಡ್ಜ್ನಲ್ಲಿ ಗೋಮಾಂಸ ಪತ್ತೆ; 11 ಆರೋಪಿಗಳ ಮನೆಗಳನ್ನು ಕೆಡವಿದ ಪೊಲೀಸರು!
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ಮಾರಾಟದ ವಿರುದ್ಧದ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯವಿರುವ ಮಾಂಡ್ಲಾದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ 11 ವ್ಯಕ್ತಿಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.