ರಾಜ್ಯಅಕ್ರಮವಾಗಿ ಮರಗಳನ್ನು ಕಡಿದ ಆರೋಪ: ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿದ್ದ ಚಕ್ರಪಾಣಿ ಅಮಾನತು
ಕೋಟ್ಯಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದ ಆರೋಪದ ಮೇಲೆ ವಿರಾಜಪೇಟೆ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ (ಡಿಸಿಎಫ್), ಸದ್ಯ ಬೆಂಗಳೂರು ನಗರ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ವೈ ಚಕ್ರಪಾಣಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿ ಆದೇಶ ಹೊರಡಿಸಿದೆ.