illegal mining

ಅಕ್ರಮ ಗಣಿಗಾರಿಕೆ: ಹರಿಯಾಣ ಕಾಂಗ್ರೆಸ್ ಶಾಸಕ, ಐಎನ್‍ಎಲ್‍ಡಿ ಮಾಜಿ ಶಾಸಕ ನಿವಾಸಗಳ ಮೇಲೆ ಇಡಿ ದಾಳಿ
ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಇತರ ಕೆಲವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವ, ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ರಮ ಗಣಿಗಾರಿಕೆ ಆರೋಪದಡಿ ಎಫ್ಐಆರ್ ದಾಖಲು
ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದ್ದು ಮುನಿರತ್ನ ಅವರನ್ನು A4 ಆರೋಪಿ ಎಂದು ಗುರುತಿಸಲಾಗಿದೆ.

ಅಕ್ರಮ ಮರಳು ದಂಧೆ ಪ್ರಕರಣ: ಅಧಿಕಾರಿಗಳ ಬೆವರಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಜಿಲ್ಲೆಯಲ್ಲಿ ನಡೆಯುತ್ತಿರುವ ಗಾಂಜಾ, ಜೂಜು, ಕ್ರಿಕೆಟ್ ಗ್ಯಾಂಬ್ಲಿಂಗ್, ಮರಳು ದಂಧೆ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿಮಗೆ ಸಾಧ್ಯವಾಗುತ್ತಿಲ್ಲವೇಕೆ? ಎಂದು ಜಿಲ್ಲಾ ಉಸ್ತುವಾರಿ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆರೋಪಿತ ವ್ಯಕ್ತಿಯ ಮಾಲೀಕತ್ವದ ರೂ. 5.21 ಕೋಟಿ ಮೊತ್ತದ ಆರು ಸ್ಥಿರಾಸ್ತಿಯನ್ನು ಇಡಿ ಬೆಂಗಳೂರು ವಲಯ ಅಧಿಕಾರಿ ವಶಕ್ಕೆ ಪಡೆದಿದ್ದಾರೆ.

ರಾಜಸ್ಥಾನ: ಅಕ್ರಮ ಗಣಿಗಾರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ಸಾಧು ಆತ್ಮಹತ್ಯೆಗೆ ಯತ್ನ; ಗಂಭೀರ ಸ್ಥಿತಿ!
ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಪಸೋಪಾ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ವಿರೋಧಿಸಿ ಸಾಧುಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಹರಿಯಾಣದಲ್ಲಿ ಅಕ್ರಮ ಗಣಿಗಾರಿಕೆ: ಕಾರ್ಯಾಚರಣೆಗಿಳಿದಿದ್ದ ಡಿಎಸ್ ಪಿ ಮೇಲೆ ಟ್ರಕ್ ಹರಿಸಿ ಹತ್ಯೆ
ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾ ತಂಡವನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.

ಅಕ್ರಮ ಗಣಿಗಾರಿಕೆ ಕುರಿತು ಪರಿಶೀಲನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯ ಸುತ್ತಮುತ್ತ ಯಾವುದೇ ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿಕೆ ನಂತರಸಮಾಜ ಪರಿವರ್ತನಾ ಸಮಿತಿ 2017ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಹೈಕೋರ್ಟ್ ಮಂಗಳವಾರ ವಿಲೇವಾರಿ ಮಾಡಿತು.

ಅಕ್ರಮ ಗಣಿಗಾರಿಕೆ ಪ್ರಕರಣದ ಅಧಿಕಾರಿಗಳ ವಿರುದ್ಧ ತನಿಖೆ ತ್ವರಿತಗೊಳಿಸಿ: ಲೋಕಾಯುಕ್ತಕ್ಕೆ ಹೈಕೋರ್ಟ್ ಸೂಚನೆ
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ರಾಜ್ಯ ಸರ್ಕಾರ ವಹಿಸಿಕೊಟ್ಟ ಶಿಸ್ತು ವಿಚಾರಣೆಯನ್ನು ರದ್ದುಪಡಿಸುವಂತೆ ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧದ ಚಾರ್ಜ್‌ಶೀಟ್ ಅನ್ನು ನಿಗದಿಪಡಿಸುವಂತೆ ಲೋಕಾಯುಕ್ತರು ಸಲ್ಲಿಸಿದ ರಿಟ್ ಅರ್ಜಿಗಳನ್ನು ಅನುಮತಿಸಿ, ಕರ್ನಾಟಕ ಹೈಕೋರ್ಟ್ಆದೇಶಿಸಿದೆ.

ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯಪಾಲರಿಗೆ ಸಂಸದೆ ಸುಮಲತಾ ಮನವಿ
ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಅಣೆಕಟ್ಟಿಗೆ ಅಪಾಯವಿದೆ, ರೈತರಿಗೆ ಅಪಾಯವಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಂಸದೆ ಸುಮಲತಾ ಅಂಬರೀಷ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

