ರಾಜ್ಯಅಕ್ರಮವಾಗಿ ಮನೆಗಳಲ್ಲಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ತೀವ್ರಗೊಂಡಿದ್ದು, ಆಕ್ಸಿಜನ್ ಕೊರತೆ ಎದುರಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಜನರು ತಮ್ಮ ತಮ್ಮ ಮನೆಗಳಲ್ಲಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿದ್ದು, ಅಕ್ರಮವಾಗಿ ಆಕ್ಸಿಜನ್ ದಾಸ್ತಾನು ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.