ರಾಜ್ಯರಾಜ್ಯದಲ್ಲಿ ಅಕ್ರಮ ಟವರ್ಗಳು: ಟೆಲಿಕಾಂ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಅವರು ಪತ್ರ ಬರೆದ ನಂತರ ಈ ನಿರ್ದೇಶನ ನೀಡಿದ್ದಾರೆ.