ರಾಜ್ಯಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರು
ವಿಜಿನಾಪುರದ 29 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ತನ್ನನ್ನು 12 ದಿನಗಳಿಗೂ ಹೆಚ್ಚು ಕಾಲ ಅಕ್ರಮವಾಗಿ ಬಂಧಿಸಿ, ಮೂರು ದಿನಗಳ ಕಾಲ ತನ್ನ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡುವ ಮೂಲಕ ಥರ್ಡ್ ಡಿಗ್ರಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ.