ರಾಜ್ಯವಿಧಾನಸಭೆ ಕಲಾಪ: ಅಕ್ರಮ ಮದ್ಯ ಮಾರಾಟದಲ್ಲಿ ಅಬಕಾರಿ ಅಧಿಕಾರಿಗಳೂ ಕೈಜೋಡಿಸಿದ್ದಾರೆ- ಕ್ರಮಕ್ಕೆ ಶಾಸಕರ ಆಗ್ರಹ
ಗ್ರಾಮೀಣ ಭಾಗದಲ್ಲಿ ಮನೆ, ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಈ ಅಕ್ರಮದಲ್ಲಿ ಅಬಕಾರಿ ಅಧಿಕಾರಿಗಳೂ ಕೂಡ ಕೈಜೋಡಿಸಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕರು ಪಕ್ಷಬೇಧ ಮರೆತು ಮಂಗಳವಾರ ಆಗ್ರಹಿಸಿದರು.