IMA scam

IMA ಹಗರಣ: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಿಬಿಐ ತನಿಖೆಗೆ ಹೂಡಿಕೆದಾರರ ಆಗ್ರಹ!
ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 50 ರ ಅಡಿಯಲ್ಲಿ, ಜಮೀರ್ ಅಹ್ಮದ್ ಖಾನ್ ಅವರಿಗೆ ಸುಮಾರು 54 ಕೋಟಿ ರೂ. ಪಾವತಿಸಲಾಗಿದೆ ಎಂದು ಮನ್ಸೂರ್ ಖಾನ್ ಹೇಳಿದ್ದಾರೆ.

IMA ಹಗರಣ: ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಕೆಗೆ ಟಿಜೆ ಅಬ್ರಹಾಂ ಮನವಿ
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಶ್ರೇಣಿಯ ಅಧಿಕಾರಿಯಾಗಿರುವ ನಿಂಬಾಳ್ಕರ್, ರಾಜ್ಯ ಗುಪ್ತಚರ ಮುಖ್ಯಸ್ಥರಾಗಿದ್ದಾರೆ. ಅಲ್ಲದೇ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರೂ ಆಗಿದ್ದಾರೆ.

ಐಎಂಎ ಹಗರಣ: ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬಹುಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧದ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಐಎಂಎ ಹಗರಣದ ಆರೋಪಿ ಎಲ್ ಸಿ ನಾಗರಾಜ್ ಮಧುಗಿರಿಯ ಬಿಜೆಪಿ ಅಭ್ಯರ್ಥಿ!
ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಹುಕೋಟಿ ಐ ಮಾನಿಟರಿ ಅಡ್ವೈಸರಿ (IMA) ಪೊಂಜಿ ಹಗರಣದ ಆರೋಪಿ ಮತ್ತು ಮಾಜಿ ಕೆಎಎಸ್ ಅಧಿಕಾರಿ ಎಲ್ ಸಿ ನಾಗರಾಜ್ ಅವರನ್ನು ಅಭ್ಯರ್ಥಿಯನ್ನಾಗಿಸಿ ಬಿಜೆಪಿ ಅಚ್ಚರಿ ಮೂಡಿಸಿದೆ.

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿಗಳ ಮೌಲ್ಯಮಾಪನ; ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ
ಠೇವಣಿದಾರರ ಹಿತಾಸಕ್ತಿ ಕಾಪಾಡುವ ಸಲುವಾಗಿ ಐಎಂಎ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಆರ್ ರೋಶನ್ ಬೇಗ್ ಅವರ ಸ್ಥಿರ ಹಾಗೂ ಚರಾಸ್ತಿಗಳನ್ನು ಲಗತ್ತಿಸಲು ಎರಡು ಅಧಿಸೂಚನೆಗಳನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ
ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್'ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

ಬಹುಕೋಟಿ ಐಎಂಎ ಹಗರಣ: ರೋಶನ್ ಬೇಗ್, ಮನ್ಸೂರ್ ಖಾನ್ ವಿರುದ್ಧ ಸಿಬಿಐ ಚಾರ್ಜ್‌ಶೀಟ್
ಮಾಜಿ ಕಾಂಗ್ರೆಸ್ ಸಚಿವ ಆರ್. ರೋಶನ್ ಬೇಗ್ ಅವರ ಡ್ಯಾನಿಶ್ ಪಬ್ಲಿಕೇಶನ್ಸ್, ಐಎಂಎ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಮನ್ಸೂರ್ ಖಾನ್ ಮತ್ತು ಕಂಪನಿಯ ಇತರ ನಿರ್ದೇಶಕರ ವಿರುದ್ಧ ಕೇಂದ್ರ ತನಿಖಾ ದಳ(ಸಿಬಿಐ) ನ್ಯಾಯಾಲಯಕ್ಕೆ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ.

ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನು
ಐಎಂಎ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಗೆ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ಐಎಂಎ ಹಗರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಡಿಸೆಂಬರ್ 2ರವರೆಗೆ ಸಿಬಿಐ ಕಸ್ಟಡಿ
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನಾಳೆ(ಡಿಸೆಂಬರ್ 2)ಯವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

