IMD

ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಐದು ದಿನ ಮಳೆ: ಐಎಂಡಿ ಮುನ್ಸೂಚನೆ
ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮೋಚಾ ಚಂಡಮಾರುತ ಸೃಷ್ಟಿ; ಕರ್ನಾಟಕ ಸೇರಿ ಹಲವೆಡೆ ವ್ಯಾಪಕ ಮಳೆ: ಹವಾಮಾನ ಇಲಾಖೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಪೂರ್ವ ಭಾರತದಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ: ಐಎಂಡಿ
ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೊದಲ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ದೇಶದ ದಕ್ಷಿಣ ಪ್ರದೇಶದಲ್ಲಿ 46-55 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಮುಂದಿನ 5 ದಿನ ಭಾರತದಲ್ಲಿ ಉಷ್ಣಹವೆ ಪರಿಸ್ಥಿತಿ ಇರುವುದಿಲ್ಲ: ಹವಾಮಾನ ಇಲಾಖೆ
ಬೇಸಿಗೆ ಧಗೆಯಲ್ಲಿ ಬೆಂದು ಹೋಗಿರುವ ಜನಕ್ಕೆ ಕೇಂದ್ರ ಹವಾಮಾನ ಇಲಾಖೆ ಕೊಂಚ ಸಮಾಧಾನದ ಮಾಹಿತಿ ನೀಡಿದ್ದು, ಮುಂದಿನ 5 ದಿನ ಭಾರತದಲ್ಲಿ ಉಷ್ಣಹವೆ ಪರಿಸ್ಥಿತಿ ಇರುವುದಿಲ್ಲ ಎಂದು ಹೇಳಿದೆ.

ಉದ್ಯಾನನಗರಿ ಬೆಂಗಳೂರಿನಲ್ಲಿ 36 ಡಿಗ್ರಿ, ಕಲಬುರಗಿಯಲ್ಲಿ 41 ಡಿಗ್ರಿ ತಾಪಮಾನ; ಬೇಸಿಗೆ ಧಗೆಗೆ ರಾಜ್ಯದ ಜನ ತತ್ತರ!
ರಾಜ್ಯದಲ್ಲಿ ಬೇಸಿಗೆ ಅಬ್ಬರ ಜೋರಾಗಿದ್ದು, ಬಿಸಿಲ ಧಗೆಗೆ ಅಕ್ಷರಶಃ ಕರ್ನಾಟಕದ ಜನತೆ ತತ್ತರಿಸಿ ಹೋಗಿದೆ.

ಜಾಗರೂಕರಾಗಿರಿ: ಆಂಧ್ರ ಸೇರಿದಂತೆ ಈ ರಾಜ್ಯಗಳಲ್ಲಿ ಬಿಸಿಗಾಳಿ ಬಗ್ಗೆ ಎಚ್ಚರಿಕೆ; ಎಲ್ಲೆಲ್ಲಿ ಇರಲಿದೆ ಉಷ್ಣ ಹವೆ!
ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳ ಬಯಲು ಪ್ರದೇಶಗಳಲ್ಲಿ ಭಾರೀ ಉಷ್ಣ ಹವೆ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.

ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 12 ಮಿಮೀ ಮಳೆ ಸುರಿದಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ದಿನವೊಂದರಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಅವಧಿಗೂ ಮೊದಲೇ ರಾಜ್ಯದಲ್ಲಿ ಬೇಸಿಗೆ ಝಳ; ತಾಪಮಾನ ದಿಢೀರ್ ಏರಿಕೆ
ಕರ್ನಾಟಕದಲ್ಲಿ ಅವಧಿಗೂ ಮೊದಲೇ ಬೇಸಿಗೆ ಕಾಲಿಡಲಿದ್ದು, ತಾಪಮಾನ ದಿಢೀರ್ ಏರಿಕೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಶೀತಗಾಳಿಗೆ ದೆಹಲಿ ತತ್ತರ: ತಾಪಮಾನ 1.4 ಡಿಗ್ರಿಗೆ ಕುಸಿತ, ಹಾಲಿ ಋತುವಿನ ಕನಿಷ್ಠ ದಾಖಲೆ
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತ, ವಾಯವ್ಯ ಭಾರತದ ಬಯಲುಪ್ರದೇಶಗಳಲ್ಲಿ ಶೀತಗಾಳಿ ಹೆಚ್ಚಾಗಿದ್ದು, ದೆಹಲಿಯಲ್ಲಿ ಹಾಲಿ ಋತುವಿನ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

