Imran Khan

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪ, ಅಮೆರಿಕದ ದ್ವಿಮುಖ ನೀತಿಗೆ ಪಾಕ್ ಬಲಿ ಎಂದ ಇಮ್ರಾನ್ ಖಾನ್
ಅಮೆರಿಕದ ಉಪಕಾರ ಸ್ಮರಣೆಯಿಲ್ಲದಿರುವಿಕೆ ಗುಣಕ್ಕೆ ಮತ್ತು ಅಂತಾರಾಷ್ಟ್ರೀಯ ದ್ವಿಮುಖ ನೀತಿಗೆ ಪಾಕಿಸ್ತಾನ ಬಲಿಯಾಗುತ್ತಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಗಂಬೀರ ಆರೋಪ ಮಾಡಿದ್ದಾರೆ.

'ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ': ಗಿಲಾನಿ ನಿಧನಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಂತಾಪ, ಶೋಕಾಚರಣೆ ಘೋಷಣೆ
ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (91) ನಿಧನಕ್ಕೆ ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದು, ಗಿಲಾನಿ ಅವರನ್ನು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದಿದ್ದಾರೆ.

ಪಾಕ್ ನಲ್ಲಿ ಅರಾಜಕತೆ, ಇಮ್ರಾನ್ ಸರ್ಕಾರ ನಾಲಾಯಕ್ ಸರ್ಕಾರ: ನವಾಜ್ ಶರೀಫ್ ಪುತ್ರಿ
ಆದಷ್ಟು ಬೇಗನೆ ಪಾಕ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ತಮ್ಮ ತಂದೆ ಲಂಡನ್ ನಿಂದ ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಮರಿಯಂ ಹೇಳಿದ್ದಾರೆ.

ಅಫ್ಘಾನಿಸ್ತಾನ ಪರಿಸ್ಥಿತಿ: ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕ್ ಪ್ರಧಾನಿ ಚರ್ಚೆ
ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕಿಸ್ತಾನ ಪ್ರಧಾನಿ ಚರ್ಚಿಸಲಿದ್ದಾರೆ ಎಂದು ಪಾಕಿಸ್ತಾನದ ಜಿಯೋ ಟಿವಿ ಬ್ರಾಡ್ಕಾಸ್ಟರ್ ಸೋಮವಾರ ವರದಿ ಮಾಡಿದೆ.

ತಾಲಿಬಾನಿಗಳು ಕೂಡ ಸಾಮಾನ್ಯ ನಾಗರೀಕರೇ, ಉಗ್ರರಲ್ಲ: ಪಾಕ್ ಪ್ರಧಾನಿ ಇಮ್ರಾನ್ ಖಾನ್
ತಾಲಿಬಾನಿಗಳೂ ಕೂಡ ಸಾಮಾನ್ಯ ನಾಗರೀಕರೇ, ಅವರೇನು ಉಗ್ರರಲ್ಲ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಬುಧವಾರ ಹೇಳಿದ್ದಾರೆ.

ಪಿಒಕೆ ಚುನಾವಣೆ: ಇಮ್ರಾನ್ ಖಾನ್ ನೇತೃತ್ವದ ಪಕ್ಷಕ್ಕೆ ಗೆಲುವು
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

ಪಿಒಕೆಯಲ್ಲಿ ಮೋದಿ, ಆರ್'ಎಸ್ಎಸ್ ವಿರುದ್ಧ ಇಮ್ರಾನ್ ಖಾನ್ ವಾಗ್ದಾಳಿ: ಕಾಶ್ಮೀರದ ರಾಯಭಾರಿ ಎಂದು ಸ್ವತಃ ಬಿಂಬಿಸಿಕೊಂಡ ಪಾಕ್ ಪ್ರಧಾನಿ
ಪಾಕಿಸ್ತಾನ ಆಕ್ರಮಿಕ ಕಾಶ್ಮೀರದಲ್ಲಿ ಚುನಾವಣೆ ಪ್ರಚಾರ ನಡೆಸಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ಪಾಕಿಸ್ತಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ. 5.4 ಏರಿಕೆ ಮಾಡಿದ ಇಮ್ರಾನ್ ಖಾನ್ ಸರ್ಕಾರ
ಪಾಕಿಸ್ತಾನ ರಾಷ್ಟ್ರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದು, ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ರೂ.5.4 ರಷ್ಟು ಮತ್ತು ಹೈ-ಸ್ಪೀಡ್ ಡೀಸೆಲ್ (ಎಚ್‌ಎಸ್‌ಡಿ) ದರವನ್ನು ರೂ.2.54 ರಷ್ಟು ಹೆಚ್ಚಳ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ನಟ ದಿಲೀಪ್ ಕುಮಾರ್ ಅವರ ಔದಾರ್ಯ ನೆನೆದ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಭಾರತೀಯ ಸಿನಿಮಾದ ದಿಗ್ಗಟ ನಟ ದಿಲೀಪ್ ಕುಮಾರ್ ಅವರ ನಿಧನಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಂತಾಪ ಸೂಚಿಸಿದ್ದಾರೆ. ತನ್ನ ತಾಯಿಯ ನೆನಪಿನಲ್ಲಿ ಕ್ಯಾನ್ಸರ್ ಆಸ್ಪತ್ರೆಗಳನ್ನು ಸ್ಥಾಪಿಸಲು ಟ್ರಸ್ಟ್ ವೊಂದಕ್ಕೆ ನಿಧಿ ಸಂಗ್ರಹಿಸುವಲ್ಲಿ ದಿಲೀಪ್ ಕುಮಾರ್ ಅವರ ಔದಾರ್ಯವನ್ನು ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

