ರಾಜ್ಯಲೋಕಾಯುಕ್ತ ಆಂತರಿಕ ಭ್ರಷ್ಟಾಚಾರ ಪ್ರಕರಣ: ವಿಚಾರಣೆ ನಿಲ್ಲಿಸಲು ಸಾಧ್ಯವಿಲ್ಲ ಎಂದ ವಿಶೇಷ ನ್ಯಾಯಾಲಯ
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಆಂತರಿಕ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ಯರಬಾಟಿ ವಿರುದ್ಧದ ವಿಚಾರಣೆಗೆ ತಡೆ ನೀಡಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ.