INDIA bloc

ಲೋಕಸಭೆ ಚುನಾವಣೆ: 21 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಹಂತದ ಮತದಾನ ಆರಂಭ
ದೇಶದ 102 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ. 1,600ಕ್ಕೂ ಅಧಿಕ ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಗಳಲ್ಲಿ ಭದ್ರವಾಗಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ಅಣ್ವಸ್ತ್ರಗಳ ವಿರುದ್ಧ ಇರುವವರು ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಟೀಕೆ
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

NDA ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವಷ್ಟು ಸೀಟು ಬರಲ್ಲ: ಸಿಎಂ ಸಿದ್ದರಾಮಯ್ಯ
ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದಿದ್ದರೂ, ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‌ಡಿಎಗೆ ಸಾಕಷ್ಟು ಸ್ಥಾನಗಳು ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಆಹ್ವಾನ ತಿರಸ್ಕರಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶ್ರೀರಾಮನನ್ನು ಅವಮಾನಿಸಿವೆ: ಪ್ರಧಾನಿ ನರೇಂದ್ರ ಮೋದಿ
ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದೆ ಇಂಡಿಯಾ ಮೈತ್ರಿಕೂಟದ ನಾಯಕರು ಶ್ರೀರಾಮನನ್ನು ಅವಮಾನಿಸಿದ್ದಾರೆ ಮತ್ತು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಎಷ್ಟು ಮುಳುಗಿದೆ ಎಂದರೆ ಅವರು ಎಂದಿಗೂ ಅದರಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು.

ಇಂಡಿಯಾ ಮೈತ್ರಿಕೂಟಕ್ಕೆ ಇದು ಸೈದ್ಧಾಂತಿಕ ಹೋರಾಟ; ಚುನಾವಣೆ ನಂತರ ಪ್ರಧಾನಿ ಅಭ್ಯರ್ಥಿ ನಿರ್ಧಾರ: ರಾಹುಲ್ ಗಾಂಧಿ
ಈ ಬಾರಿಯ ಲೋಕಸಭೆ ಚುನಾವಣೆಯು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳು ಮತ್ತು ಅವುಗಳನ್ನು ರಕ್ಷಿಸುವ ಶಕ್ತಿಗಳ ನಡುವಿನ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ INDI ಮೈತ್ರಿಕೂಟಕ್ಕೆ ಆಘಾತ: PDP ಪ್ರತ್ಯೇಕ ಸ್ಪರ್ಧೆ, ಅಡಕತ್ತರಿಯಲ್ಲಿ National Conference!
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಮೈತ್ರಿಕೂಟದ ವಿರುದ್ಧ ಮಹಾಕಾಳಗಕ್ಕೆ ಸಿದ್ಧವಾಗಿರುವ INDIA ಮೈತ್ರಿಕೂಟಕ್ಕೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಆಘಾತ ಎದುರಾಗಿದೆ.

ಭ್ರಷ್ಟರ ವಿರುದ್ಧ ದೊಡ್ಡ ಹೋರಾಟ, ಕಾಂಗ್ರೆಸ್ ಮಿತ್ರಕೂಟದ ದಾಳಿಗೆ ಹೆದರುವುದಿಲ್ಲ: ಪ್ರಧಾನಿ ಮೋದಿ
ಇಂಡಿಯಾ ಒಕ್ಕೂಟದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಭ್ರಷ್ಟರ ವಿರುದ್ಧ ದೊಡ್ಡ ಹೋರಾಟ, ದಾಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ INDIA ಮೈತ್ರಿಕೂಟದ 5 ಬೇಡಿಕೆಗಳು ಇಂತಿವೆ...
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ ಇಂದು ನಡೆದಿದ್ದು, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.

ಪ್ರಜಾಪ್ರಭುತ್ವ ಬೇಕಾದರೆ ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮನವಿ
ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ನೆಲೆಸಬೇಕಾದರೆ ಇಂಡಿಯಾ ಮೈತ್ರಿಕೂಟಕ್ಕೆ ಮತ ಹಾಕುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಲ್ಲಿನ ಜನರಿಗೆ ಕರೆ ನೀಡಿದ್ದಾರೆ.

