INDIA bloc

ಇಂಡಿಯಾ ಮೈತ್ರಿಕೂಟ: ಎಎಪಿ ಜೊತೆ ಸೀಟು ಹಂಚಿಕೆಯ ಮಾತುಕತೆ ಸಕಾರಾತ್ಮಕವಾಗಿದೆ- ಕಾಂಗ್ರೆಸ್
ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಡುವಿನ ಮೊದಲ ಔಪಚಾರಿಕ ಸೀಟು ಹಂಚಿಕೆ ಮಾತುಕತೆ ಸೋಮವಾರ ಸಕಾರಾತ್ಮಕವಾಗಿ ಆರಂಭಗೊಂಡಿದ್ದು, ದೆಹಲಿ ಮತ್ತು ಪಂಜಾಬ್‌ನಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಒಟ್ಟಾಗಿ ಹೋರಾಡಲು ನಿರ್ಧರಿಸಿವೆ.

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಇಂಡಿಯಾ ಮೈತ್ರಿಕೂಟಕ್ಕೆ ತೀವ್ರ ಮರ್ಮಾಘಾತ: ವಿಜಯೇಂದ್ರ
ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದಿಂದ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ತೀವ್ರ ಮರ್ಮಾಘಾತವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಇಂಡಿಯಾ ಒಕ್ಕೂಟದಲ್ಲಿ ಯಾವುದೇ ಹುದ್ದೆ ಬೇಡ: ಸಿಎಂ ನಿತೀಶ್ ಕುಮಾರ್
2024ರ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ನೀಡಿದ ಸಲಹೆಯಿಂದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು.

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ; ಲೋಕಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನ ಗೆಲ್ಲುವ ಒತ್ತಡದಲ್ಲಿ ರಾಜ್ಯ ಕಾಂಗ್ರೆಸ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸಬೇಕೆಂಬ ಕೂಗು ಕೇಳಿಬಂದಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕರ್ನಾಟಕ ಕಾಂಗ್ರೆಸ್‌ಗೆ ಒತ್ತಡ ಹೇರುವ ಸಾಧ್ಯತೆಯಿದೆ.

INDIA ಸಭೆ: ಭಾಷಾಂತರ ಕೇಳಿದ ಡಿಎಂಕೆ ನಾಯಕ; ಹಿಂದಿ ರಾಷ್ಟ್ರ ಭಾಷೆ, ಪ್ರತಿಯೊಬ್ಬರೂ ಕಲಿಯಬೇಕು ಎಂದ ನಿತೀಶ್ ಕುಮಾರ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸಲು ಮನವಿ ಮಾಡಿದ ಡಿಎಂಕೆ ನಾಯಕರ ವಿರುದ್ಧ ಕಿಡಿಕಾರಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

INDIA ಮೈತ್ರಿಕೂಟದ ಸಭೆ: ಬದಲಾಗುತ್ತಾ ಬಿಜೆಪಿ ವಿರುದ್ಧದ ಕಾರ್ಯತಂತ್ರ?
ಪಂಚರಾಜ್ಯಗಳ ಚುನಾವಣೆ ಬಳಿಕ INDIA ಮೈತ್ರಿಕೂಟಕ್ಕೆ ಸ್ಥಾನ ಹಂಚಿಕೆ ಪ್ರಮುಖ ಸವಾಲಾಗಿ ಪರಿಣಮಿಸಿದೆ. ಮೈತ್ರಿಕೂಟದ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಲು ಡಿ.19 ರಂದು ಮೈತ್ರಿಕೂಟದ ಸಭೆ ನಡೆಯಲಿದೆ.

ಮೌನ ಮುರಿದ ಸಮಾಜವಾದಿ ಪಕ್ಷ: ಹಿಂದೂ ಧರ್ಮದ ಕುರಿತ ಹೇಳಿಕೆಗೆ INDIA ಮಿತ್ರಪಕ್ಷ ಡಿಎಂಕೆ ವಿರುದ್ಧ ಕಿಡಿ
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರ ಬಗ್ಗೆ INDIA ಮಿತ್ರ ಪಕ್ಷ ಡಿಎಂಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪ್ತ ಐಪಿ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂಡಿಯಾ ಮೈತ್ರಿಕೂಟ ನಮ್ಮಿಂದ ಅಂತರ ಕಾಯ್ದುಕೊಂಡ ಬಳಿಕವೇ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ: ಎಚ್‌ಡಿ ದೇವೇಗೌಡ
ಕಾಂಗ್ರೆಸ್ ಮತ್ತು ಅದರ ಇಂಡಿಯಾ ಮೈತ್ರಿಕೂಟದ ಪಕ್ಷಗಳು ತಮ್ಮ ಪ್ರಾದೇಶಿಕ ಪಕ್ಷದಿಂದ ಅಂತರ ಕಾಯ್ದುಕೊಂಡ ನಂತರ 2024ರ ಲೋಕಸಭೆ ಚುನಾವಣೆ ಅಂಗವಾಗಿ ಬಿಜೆಪಿಯೊಂದಿಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿದೆ ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೋಮವಾರ ಹೇಳಿದ್ದಾರೆ.

ಪ್ರಜಾಪ್ರಭುತ್ವ ಉಳಿಸಲು ಮೋಹನ್ ಭಾಗವತ್ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು: ಸಂಜಯ್ ರಾವುತ್
ದೇಶದಲ್ಲಿ 'ಪ್ರಜಾಪ್ರಭುತ್ವವನ್ನು ಉಳಿಸಲು' ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡಬೇಕು ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಮಂಗಳವಾರ ಹೇಳಿದ್ದಾರೆ.

