India Covid Cases

ಕೊರೋನಾ 3ನೇ ಅಲೆ ಆತಂಕ: ಶೀಘ್ರದಲ್ಲೇ ಗರ್ಭಿಣಿ ಮಹಿಳೆಯರಿಗೂ ಲಸಿಕೆ
ತಜ್ಞರ ತಂಡ ಶಿಫಾರಸಿನ ನಂತರ ಕೇಂದ್ರ ಆರೋಗ್ಯ ಸಚಿವಾಲಯವು ಗರ್ಭಿಣಿ ಮಹಿಳೆಯರಿಗೆ ಶೀಘ್ರದಲ್ಲೇ ಕೋವಿಡ್ -19 ಲಸಿಕೆ ನೀಡಲು ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಮತ್ತಷ್ಟು ಅನ್ಲಾಕ್: ನಾಳೆಯಿಂದ ಬಾರ್, ರೆಸ್ಟೋರೆಂಟ್, ಪಾರ್ಕ್ ತೆರೆಯಲು ಅವಕಾಶ
ಕೊರೋನಾ ಎರಡನೇ ಅಲೆಯಿಂದಾಗಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತ ಹಂತವಾಗಿ ಅನ್ಲಾಕ್ ಮಾಡುತ್ತಿರುವ ದೆಹಲಿ ಸರ್ಕಾರ ಸೋಮವಾರದಿಂದ ಬಾರ್, ಸಾರ್ವಜನಿಕ ಉದ್ಯಾನವನಗಳನ್ನು ಪುನಃ ತೆರೆಯಲು ಅನುಮತಿ ನೀಡಿದೆ.

ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ
ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ ಎಂದು ಸರ್ಕಾರಿ ಸಮಿತಿ ದೃಢಪಡಿಸಿದೆ.

ಡೆಲ್ಟಾ ಪ್ಲಸ್: ಭಾರತದಲ್ಲಿ ಹೊಸ ಕೋವಿಡ್ ರೂಪಾಂತರ ಪತ್ತೆ; ತಕ್ಷಣಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದ ತಜ್ಞರು!
ದೇಶದಲ್ಲಿ ಸಾಂಕ್ರಾಮಿಕ ರೋಗ ಕೋವಿಡ್ ಎರಡನೇ ಅಲೆಗೆ ಡೆಲ್ಟಾ ರೂಪಾಂತರಿ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡೆಲ್ಟಾ ಪ್ಲಸ್ ಅಥವಾ ಎವೈ.1 ಎಂಬ ರೂಪಾಂತರಿ ತಳಿ ಪತ್ತೆಯಾಗಿದೆ. ಆದರೆ ಸದ್ಯದ ಮಟ್ಟಿಗೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಅಸ್ಸಾಂ: ಪ್ರತಿದಿನ 3 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಲು 2,000 ತಂಡಗಳ ರಚನೆ!
ಸಾಕಷ್ಟು ಸಂಖ್ಯೆಯ ಡೋಸ್‌ಗಳು ಲಭ್ಯವಿರುವುದರಿಂದ ಪ್ರತಿದಿನ ಮೂರು ಲಕ್ಷ ಜನರಿಗೆ ಲಸಿಕೆ ನೀಡಲು ರಾಜ್ಯ ಸರ್ಕಾರ 2,000 ತಂಡಗಳನ್ನು ರಚಿಸಿದೆ ಎಂದು ಅಸ್ಸಾಂ ಆರೋಗ್ಯ ಸಚಿವ ಕೇಶಬ್ ಮಹಂತಾ ಶನಿವಾರ ತಿಳಿಸಿದ್ದಾರೆ.

ಕೋವಿಡ್ 3ನೇ ಅಲೆ ಸಾಧ್ಯತೆಗಳು ನಿಜ; ದೆಹಲಿ ಸರ್ಕಾರದಿಂದ ಸಮರೋಪಾದಿಯಲ್ಲಿ ಸಿದ್ಧತೆ: ಸಿಎಂ ಕೇಜ್ರಿವಾಲ್
ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಸಾಧ್ಯತೆಗಳು ಹೆಚ್ಚಿದ್ದು, ಅದನ್ನು ನಿಭಾಯಿಸಲು ದೆಹಲಿ ಸರ್ಕಾರ ಯುದ್ಧ ಸನ್ನದ್ಧ ರೀತಿ ತಯಾರಿ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈವರೆಗೆ ರಾಜ್ಯಗಳಿಗೆ ಸುಮಾರು 25.87 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ
ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ಈವರೆಗೆ ಸುಮಾರು 25 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ಡೋಸ್ ಗಳನ್ನು ಪೂರೈಸಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇಂಟರ್ನೆಟ್ ಇಲ್ಲದವರಿಗೂ ಜೀವಿಸುವ ಹಕ್ಕಿದೆ, ಲಸಿಕೆ ಪಡೆಯಲು ಸ್ಥಳದಲ್ಲೇ ನೋಂದಣಿ ವ್ಯವಸ್ಥೆ ಇರಲಿ: ರಾಹುಲ್ ಗಾಂಧಿ
ನೋಂದಣಿ ಮಾಡದಿದ್ದರೂ ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.

ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ 24 ಕೋಟಿ ಗಡಿ ದಾಟಿದೆ: ಕೇಂದ್ರ
ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ನೀಡಲಾಗುವ ಕೋವಿಡ್ -19 ಲಸಿಕೆ ಡೋಸ್ ಗಳ ಒಟ್ಟು ಸಂಖ್ಯೆ 24 ಕೋಟಿ ಮೀರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.

