ಕ್ರಿಕೆಟ್ವಿಶ್ವಕಪ್ನಲ್ಲಿ ಹೊಸ ದಾಖಲೆ ಬರೆದ ಕನ್ನಡಿಗ ಕೆಎಲ್ ರಾಹುಲ್! ಅಭಿಮಾನಿಗಳು ಹೇಳಿದ್ದು ಹೀಗೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾದರು.